ಜಿಲ್ಲೆ

ಸಾಲಬಾಧೆಯಿಂದ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Haveri - Kariyappa Aralikatti

ಹಾನಗಲ್ಲ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬಾದಾಮಗಟ್ಟಿ ಗ್ರಾಮದಲ್ಲಿ ಬುಧವಾರ ನಡೆದಿದೆ.

ಬಸವರಾಜ ಸಿದ್ದಬಸಪ್ಪ ಕೊಂಡೋಜಿ (31) ಮೃತ ರೈತ.

ಇವರು ಬ್ಯಾಂಕ್​ ಹಾಗೂ ಸಹಕಾರಿ ಸಂಘದಲ್ಲಿ 3 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಕಳೆದ ಬಾರಿ ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿತ್ತು. ಇದರಿಂದ ಸಾಲ ತೀರಿಸಲಾಗದೆ ಜಮೀನಿನಲ್ಲಿಯೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಹಾನಗಲ್ಲ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.