ಜಿಲ್ಲೆ

ಸಾಲಬಾಧೆಯಿಂದ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Haveri - Kariyappa Aralikatti

ರಾಣೆಬೆನ್ನೂರ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಟನೆ ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ನಡೆದಿದೆ.

ಹನುಮಂತ ರಾಮಪ್ಪ ಪೂಜಾರ (33) ಮೃತ ರೈತ.

ಇವರು ಬ್ಯಾಂಕ್​ನಲ್ಲಿ 1.30 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಸರಿಯಾಗಿ ಮಳೆ ಬಾರದ ಕಾರಣ ಒಣಗಿ ಹಾಳಾಗಿತ್ತು. ಇದರಿಂದ ಸಾಲ ತೀರಿಸಲಾಗದೆ ಮನನೊಂದು ಕುಮುದ್ವತಿ ನದಿ ದಂಡೆಯಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.