ಜಿಲ್ಲೆ

ಸಾಲಬಾಧೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Haveri - Kariyappa Aralikatti

ರಾಣೆಬೆನ್ನೂರ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕೋಣನತಲಿ ಗ್ರಾಮದಲ್ಲಿ ಗುರುವಾರ ನಡೆದಿದೆ.

ಮಹೇಶಪ್ಪ ಪಂಚಪ್ಪ ಬಣಕಾರ (52) ಮೃತ ರೈತ.

ಇವರು 1.25 ಎಕರೆ ಜಮೀನು ಹೊಂದಿದ್ದು ಬ್ಯಾಂಕ್​ ಹಾಗೂ ಕೈಗಡವಾಗಿ 6.25 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಸರಿಯಾಗಿ ಮಳೆ ಬಾರದ ಕಾರಣ ಹಾಳಾಗಿ ಹೋಗಿತ್ತು. ಇದರಿಂದ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.