ರಾಯಚೂರು: ನಾಡು-ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿ ಉಳಿವಿಗಾಗಿ ಜಿಲ್ಲೆಯಲ್ಲಿ ಕೆಕೆಆರ್‌ಡಿಬಿ ಮೈಕ್ರೋ ಯೋಜನೆಯಡಿ 40 ಕೋಟಿ ರೂ. ವೆಚ್ಚದ ಜಿಲ್ಲಾ ಸಮುದಾಯ ಭವನ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ತಿಳಿಸಿದ್ದಾರೆ.
ಇದನ್ನೂ ಓದಿ:ಮಹಾವೀರ ಸಮುದಾಯ ಭವನಕ್ಕೆ ಧರ್ಮಸ್ಥಳದಿಂದ ಅನುದಾನ
ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಕಲೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜಕರು, ಕಲಾಭಿಮಾನಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರ ಬಹುದಿನದ ಬೇಡಿಕೆಯಾಗಿದ್ದ ಜಿಲ್ಲಾ ಸಮುದಾಯ ಭವನದ ಕನಸನ್ನು ಕಾಂಗ್ರೆಸ್ ಸರ್ಕಾರ ನನಸು ಮಾಡುತ್ತಿದೆ ಎಂದರು.
ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಕಾರ್ಯಕ್ರಮಗಳನ್ನು ಆಯೋಜಿಸಲು ತೊಂದರೆಯಾಗುತ್ತಿತ್ತು. ವಿಶಾಲವಾದ ಸರ್ಕಾರಿ ಸಮುದಾಯ ಭವನ ಇಲ್ಲದ ಕಾರಣ ಹೆಚ್ಚಿನ ವೆಚ್ಚ ಭರಿಸಿ ಖಾಸಗಿ ಭವನಗಳಲ್ಲಿ ಕಾರ್ಯಕ್ರಮ ನಡೆಸಬೇಕಾಗಿತ್ತು. ಬೃಹತ್ ಸಮುದಾಯ ಭವನ ನಿರ್ಮಾಣದಿಂದ ದುಂದು ವೆಚ್ಚ ತಪ್ಪಿಸಲು ಹಾಗೂ ಜಿಲ್ಲೆಯ ಸಭೆ, ಸಮಾರಂಭ, ಕಲೆ ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.