ಜಿಲ್ಲೆ

ಸುರೇಶ್‌ಬಾಬು ಪರ ಘೋಷಣೆ

Davangere - Desk - Mahesh Babu E

ಹಿರಿಯೂರು: ಕೆಪಿಸಿಸಿ ಸದಸ್ಯ ಕಂದಿಕೆರೆ ಸುರೇಶ್‌ಬಾಬು ಅವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಡಬೇಕು ಎಂದು ಬೆಂಬಲಿಗರು, ಅಭಿಮಾನಿಗಳು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು.

ನಗರದ ತಾಲೂಕು ಕಚೇರಿ ಸಮೀಪ ಕುರುಬ ಸಮುದಾಯ ಭವನ ನಿರ್ಮಾಣಕ್ಕೆ ಶುಕ್ರವಾರ ಭೂಮಿ ಪೂಜೆ ನೆರವೇರಿಸಲು ಮುಖ್ಯಮಂತ್ರಿ ಆಗಮಿಸುತ್ತಿದ್ದಂತೆ ನೂರಾರು ಬೆಂಬಲಿಗರು ಘೋಷಣೆ ನೀಡಿದರು.