ಬೆಳ್ತಂಗಡಿ: ತಾಲೂಕಿನ ಗೇರುಕಟ್ಟೆ ಎಂಬಲ್ಲಿ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು ತೋಟದಲ್ಲಿ ಕೆಲಸ ಮಾಡುವವರು ಮೃತದೇಹವನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್ ಇನ್‌ಸ್ಪೆಕ್ಟರ್ ನಾಗೇಶ್ ಕದ್ರಿ, ಇನ್‌ಸ್ಪೆಕ್ಟರ್ ಮುರಳೀಧರ್ ನಾಯ್ಕ ಸೇರಿದಂತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು ಗುರುತಿಸಲು ಅಸಾಧ್ಯವಾಗಿದೆ. ಸ್ಥಳೀಯರೇ ಯಾರಾದರೂ ಇರಬೇಕು ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಈ ನಿಟ್ಟಿನಲ್ಲಿಯು ಪರಿಶೀಲನೆ ನಡೆಸಲಾಗುತ್ತಿದ್ದು ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ.