ವಿಜಯವಾಣಿ ಸುದ್ದಿಜಾಲ ನೆಲಮಂಗಲ
ನಗರದ ರೇಣುಕಾನಗರದಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ಪಂಡಿತ ದೀನದಯಾಳ ಉಪಾಧ್ಯಾಯ ಅವರ 108ನೇ ಜಯಂತಿ ಆಚರಿಸಲಾಯಿತು.
ಬಿಜೆಪಿ ಮಹಿಳಾ ಮೋರ್ಚಾ ತಾಲೂಕು ಅಧ್ಯಕ್ಷೆ ಮಂಜುಳಾಸುರೇಶ್ ಮಾತನಾಡಿ, ಪಂಡಿತ ದೀನದಯಾಳ ಉಪಾಧ್ಯಾಯರು ಬಿಜೆಪಿ ಸಂಘಟನೆಯಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ. ಜತೆಗೆ ಜನಸಂಘ ಸ್ಥಾಪನೆ ಮಾಡಿ ಬಳಿಕ ಅದು ಬಿಜೆಪಿ ಪಕ್ಷವಾಗಿ ಪರಿವರ್ತನೆಗೊಂಡಿದೆ. ಐದು ವರ್ಷಕೊಮ್ಮೆ ಪಕ್ಕದಿಂದ ಸದದಸ್ಯತ್ವ ಅಭಿಯಾನ ಕಾರ್ಯಕ್ರಮ ನಡೆಸುತ್ತಿದ್ದು, ಪ್ರತಿಯೊಬ್ಬರು ಸಕ್ರಿಯವಾಗಿ ಭಾಗವಹಿಸಿ ಅಭಿಯಾನ ಯಶಸ್ವಿಗೊಳಿಸಬೇಕು ಎಂದರು.