ಮೂಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದೀಪೋತ್ಸವ ನಡೆಯಿತು. ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಸಾರ್ವಜನಿಕ ಶನಿಪೂಜೆ, ಮಧ್ಯಾಹ್ನ ಮಹಾಪೂಜೆ, ಮಹಾ ಅನ್ನಸಂತರ್ಪಣೆ ನಡೆಯಿತು.
ಸಂಜೆ ಕ್ಷೇತ್ರದಲ್ಲಿ ಶ್ರೀ ದೇವರಿಗೆ ಸಾಮೂಹಿಕ ಪುಷ್ಪಾರ್ಚನೆ, ಲಕ್ಷದೀಪ ಬಲಿ ಉತ್ಸವ, ಅಷ್ಟಾವಧಾನ ಸೇವೆ ನಡೆಯಿತು.ಮೂಲ್ಕಿ ಸೀಮೆಯ ಅರಸ ದುಗ್ಗಣ್ಣ ಸಾವಂತ ಅರಸ, ವಾದಿರಾಜ ಉಪಾಧ್ಯಾಯ ಕೊಲಕಾಡಿ, ಧರ್ಮದರ್ಶಿ ಡಾ.ಹರಿಕಷ್ಣ ಪುನರೂರು, ಮೂಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದ ಟ್ರಸ್ಟಿ ಅತುಲ್ ಕುಡ್ವ, ಸತೀಶ್ ಭಂಡಾರಿ, ಡಾ.ಶ್ರೀವತ್ಸ ಉಪಾಧ್ಯಾಯ, ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಕಾರ್ಯನಿರ್ವಾಹಣಾಧಿಕಾರಿ ಶ್ವೇತಾ ಪಳ್ಳಿ, ಸುನಿಲ್ ಆಳ್ವ, ಮಹೀಮ್ ಹೆಗ್ಡೆ, ನಾದಸ್ವರ ವಾದಕ ನಾಗೇಶ್ ಬಪ್ಪನಾಡು, ಚಂದ್ರಶೇಖರ ಸುವರ್ಣ, ಶಿವಶಂಕರ್, ಕೃಷ್ಣರಾಜ ಬಪ್ಪನಾಡು, ಜೀರ್ಣೋದ್ಧಾರ ಸಮಿತಿ ಸದಸ್ಯರು ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಉಪಸ್ಥಿತರಿದ್ದರು.