ಉಜ್ಜಿನಿ: ಕ್ರೀಡಾಪಟುಗಳು ಸೋಲು, ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಸಮಾಜ ಸೇವಕ ಎನ್.ಟಿ. ತಮ್ಮಣ್ಣ ಹೇಳಿದರು.
ಸಮೀಪದ ನಿಂಬಳಗೆರೆ ಗ್ರಾಮದಲ್ಲಿ ಸೋಮವಾರ ಶಾಲಾ ಸಾಕ್ಷರತಾ ಇಲಾಖೆಯಿಂದ ಹಮ್ಮಿಕೊಂಡಿದ್ದ ವಲಯ ಮಟ್ಟದ ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಕ್ರೀಡೆಯಲ್ಲಿ ಭಾಗವಹಿಸುವಿಕೆಗೆ ಹೆಚ್ಚು ಪ್ರಾಮುಖ್ಯತೆ ನೀಡಬೇಕು ಮತ್ತು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು. ಸೋಲುಗಳು ಕ್ರೀಡಾಪಟುಗಳಿಗೆ ಮುಂದಿನ ಪ್ರಯತ್ನಗಳಿಗೆ ಪ್ರೇರಣೆ ನೀಡುತ್ತವೆ ಎಂದರು.
ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ತಿಪ್ಪೇಸ್ವಾಮಿ ಮಾತನಾಡಿ, ಶಾಲೆಗಳಲ್ಲಿ ಸಾಮಾನ್ಯವಾಗಿ ಶನಿವಾರ ವಿದ್ಯಾರ್ಥಿಗಳಿಗೆ ವ್ಯಾಯಾಮ ಮಾಡಿಸಲಾಗುತ್ತದೆ. ಇಂದಿನ ಆಧುನಿಕ ಜೀವನದಲ್ಲಿ ವಾರಕ್ಕೊಮ್ಮೆ ಮಾಡುವ ದೈಹಿಕ ಚಟುವಟಿಕೆ ಏನೇನೂ ಸಾಲದು. ಶಾಲೆಗಳಲ್ಲಿ ಪ್ರತಿದಿನ ಮಕ್ಕಳು ಕನಿಷ್ಠ 30ನಿಮಿಷದಷ್ಟು ಕಾಲ ದೈಹಿಕ ಚಟುವಟಿಕೆಯಲ್ಲಿ ತೊಡಗಬೇಕು.
ಮಕ್ಕಳ ಅತಿಯಾದ ಮೊಬೈಲ್ ಬಳಕೆ ಸರಿಯಲ್ಲ. ಇದಕ್ಕೆ ತಂದೆ, ತಾಯಿ ಹಾಗೂ ಶಿಕ್ಷಕರು ಕಡಿವಾಣ ಹಾಕಬೇಕು ಎಂದರು. ಗ್ರಾಪಂ ಅಧ್ಯಕ್ಷ ಎಸ್.ಶ್ರೀಕಾಂತ್, ಎಸ್ಡಿಎಂಸಿ ಅಧ್ಯಕ್ಷ ಬಿ.ಅಶೋಕ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ರವೀಂದ್ರ, ದೈಹಿಕ ಶಿಕ್ಷಣ ಪರಿವೀಕ್ಷಕ ಎಚ್.ಶಶಿಧರ್ ಇತರರಿದ್ದರು.