ಜಿಲ್ಲೆ

ಅಭಿವೃದ್ಧಿ ಹೆಸರಿನಲ್ಲಿ ಅರಣ್ಯ ನಾಶ

Avinash R

ಕೋಟ: ಇಂದು ಅಭಿವೃದ್ಧಿ ಹೆಸರಿನಲ್ಲಿ ನಮ್ಮ ದೇಶದ ಬಹುಪಾಲು ಅರಣ್ಯ ನಾಶ ಮಾಡಲಾಗುತ್ತಿದ್ದು, ಹವಾಮಾನದಲ್ಲಿ ಸಾಕಷ್ಟು ವೈಪರೀತ್ಯ ಕಾಣುತ್ತಿದ್ದೇವೆ. ನಮ್ಮ ಬದುಕು ಸಂತಸದಾಯಕವಾಗಿ ಸಾಗಬೇಕಾದರೆ ಹಸಿರು ಗಿಡಮರಗಳು ಅಗತ್ಯ ಎಂದು ಲಯನ್ಸ್ ಕ್ಲಬ್ ಜಿಲ್ಲಾ ರಾಯಭಾರಿ ಬಿ.ಅರುಣ್ ಕುಮಾರ್ ಹೆಗ್ಡೆ ಹೇಳಿದರು.

ಲಯನ್ಸ್ ಕ್ಲಬ್ ಮೊಳಹಳ್ಳಿ ಶಿವಶಾಂತಿ ಮತ್ತು ಸುಜ್ಞಾನ್ ಎಜುಕೇಶನ್ ಟ್ರಸ್ಟ್ ಕುಂದಾಪುರ, ಲಿಟ್ಲ್ ಸ್ಟಾರ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಯಡಾಡಿ ಮತ್ಯಾಡಿ ಜತೆಯಾಗಿ ಇತ್ತೀಚೆಗ ವನಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರತಿ ವರ್ಷ ವನಮಹೋತ್ಸವ ಕಾರ್ಯಕ್ರಮದಡಿ ಸರ್ಕಾರ ಹೆಚ್ಚೆಚ್ಚು ಗಿಡ ನೆಡುವ ಕಾರ್ಯಕ್ರಮ ಆಯೋಜಿಸುತ್ತಿದೆ. ಹಸಿರು ಪರಿಸರ ಕಾಪಾಡುವುದು ನಮ್ಮೆಲ್ಲರ ಹೊಣೆ ಎಂದರು.

ಲಯನ್ಸ್ ಕ್ಲಬ್ ಮೊಳಹಳ್ಳಿ ಶಿವಶಾಂತಿ ಅಧ್ಯಕ್ಷ ಯು.ಎಸ್.ಮೋಹನ್ ದಾಸ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಅರಣ್ಯ ಅಧಿಕಾರಿ ಮಂಜುನಾಥ ಗಣಪತಿ ನಾಯ್ಕ, ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ, ಲಯನ್ಸ್ ಕ್ಲಬ್ ಹಿರಿಯ ಸದಸ್ಯ ಸುಬ್ಬಣ್ಣ ಶೆಟ್ಟಿ, ಕಾರ್ಯದರ್ಶಿ ಉದಯ ಕುಮಾರ್ ಶೆಟ್ಟಿ, ಖಜಾಂಚಿ ದಯಾನಂದ, ಸಂಸ್ಥೆ ಆಡಳಿತ ಮಂಡಳಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಪ್ರತಾಪ್ ಚಂದ್ರ ಶೆಟ್ಟಿ, ಭರತ್ ಶೆಟ್ಟಿ, ಲಯನ್ಸ್ ಕ್ಲಬ್ ಜಿಲ್ಲಾ ಕ್ಯಾಬಿನೆಟ್ ಸದಸ್ಯರಾದ ಬಾಲಕೃಷ್ಣ ಹೆಗ್ಡೆ, ಜಗನ್ನಾಥ ಶೆಟ್ಟಿ, ರತ್ನಾಕರ ಶೆಟ್ಟಿ, ದೀನ್ ಪಾಲ್ ಶೆಟ್ಟಿ, ಚಂದ್ರ ಕುಲಾಲ್, ಸಂತೋಷ್ ಶೆಟ್ಟಿ ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕ ಪ್ರದೀಪ್ ಸ್ವಾಗತಿಸಿ, ಶಿಕ್ಷಕ ಸಂತೋಷ್ ಕುಮಾರ್ ಕೋಟ ಕಾರ್ಯಕ್ರಮ ನಿರೂಪಿಸಿದರು.