ಜಿಲ್ಲೆ

ಗೆಜ್ಜೆಗಿರಿ ಕ್ಷೇತ್ರದಲ್ಲಿ ಯಾತ್ರಿ ನಿವಾಸ ನಿರ್ಮಾಣ : ಮೂಲಸ್ಥಾನ ಅಭಿವೃದ್ಧಿ ಚಾರಿಟೆಬಲ್ ಟ್ರಸ್ಟ್ ಸಭೆಯಲ್ಲಿ ತೀರ್ಮಾನ

ಸೌಮ್ಯ ಆರ್

ಪುತ್ತೂರು ಗ್ರಾಮಾಂತರ: ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೆಬಲ್ ಟ್ರಸ್ಟ್ ಸಭೆ ಮಂಗಳೂರಿನ ಕಂಕನಾಡಿ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಟ್ರಸ್ಟ್ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವ ಅಧ್ಯಕ್ಷತೆಯಲ್ಲಿ ನಡೆಯಿತು.

ವಿಶ್ವದ ಬಿಲ್ಲವರು ಸೇರಿಕೊಂಡು ನಿರ್ಮಿಸಿದ ಗೆಜ್ಜೆಗಿರಿ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿ ಹಾಗೂ ಮಾತೆ ದೇಯಿ ಬೈದ್ಯೆತಿ, ಕೋಟಿಚೆನ್ನಯರ ಆದರ್ಶಗಳ ಜತೆಗೆ ನಾಟಿ ವೈದ್ಯದ ವಿಶೇಷತೆಯನ್ನು ಜಗತ್ತಿಗೆ ಸಾರುವ ಕೆಲಸ ಮಾಡುವ ನಿಟ್ಟಿನಲ್ಲಿ ದೇಯಿ ಬೈದ್ಯೆತಿ ಕೋಟಿಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೆಬಲ್ ಟ್ರಸ್ಟ್ ಕೆಲಸ ಮಾಡಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವ ಹೇಳಿದರು.

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯಿಂದ ಖರೀದಿಸಿರುವ ಕ್ಷೇತ್ರದ ಪಕ್ಕದಲ್ಲಿರುವ ಜಾಗದಲ್ಲಿ ವಿಶ್ವದ ಬಿಲ್ಲವರನ್ನು ಸೇರಿಸಿಕೊಂಡು ಯಾತ್ರಿ ನಿವಾಸ ನಿರ್ಮಿಸುವ ಬಗ್ಗೆ ಮತ್ತು ಈ ಕಾಮಗಾರಿಗೆ ಶಂಕುಸ್ಥಾಪನೆ ಮಾಡುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು.

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ, ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ವಾಸ್ತುತಜ್ಞ ಆರ್ಕಿಟೆಕ್ಟ್ ಪ್ರಮಲ್ ಕುಮಾರ್ ಕಾರ್ಕಳ, ಕ್ಷೇತ್ರಾಡಳಿತ ಉಪಾಧ್ಯಕ್ಷರಾದ ಉಲ್ಲಾಸ್ ಕೋಟ್ಯಾನ್, ದೀಪಕ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಡಾ.ರಾಜಾರಾಮ್ ಕೆ.ಬಿ., ಕೋಶಾಧಿಕಾರಿ ಮೋಹನ್ ದಾಸ್ ವಾಮಂಜೂರು, ಟ್ರಸ್ಟ್ ಕೋಶಾಧಿಕಾರಿ ಹರೀಶ್ ಸಾಲ್ಯಾನ್ ಬಜಗೋಳಿ, ಪ್ರಮುಖರಾದ ಡಾ.ಸಂತೋಷ್ ಕುಮಾರ್ ಬೈರಂಪಳ್ಳಿ, ನಾರಾಯಣ ಮಚ್ಚಿನ, ರಾಜೇಂದ್ರ ಚಿಲಿಂಬಿ, ಜಯವಿಕ್ರಮ್ ಕಲ್ಲಾಪು, ಹರೀಶ್ ಕೆ.ಪೂಜಾರಿ, ಕುಮಾರ್ ಇರುವೈಲ್, ಜಯರಾಮ ಪೂಜಾರಿ ಬೆಳುವಾಯಿ, ಜಯರಾಮ್ ಬಂಗೇರ ಹೆರಾಜೆ ಬೆಳ್ತಂಗಡಿ ಮತ್ತಿತರರಿದ್ದರು.