ವಿಜಯಪುರದ ಜಿಪಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಿಷಿ ಆನಂದ ಮಾತನಾಡಿದರು. ಎನ್​.ಕೆ. ಗೋಠೆ, ಇಲಿಯಾಸ್​ ಅಹ್ಮದ ಬೋರಾಮಣಿ ಮತ್ತಿತರರಿದ್ದಾರೆ. 
ಜಿಲ್ಲೆ

ಐದೂ ಗ್ಯಾರಂಟಿ ಜನತೆಗೆ ತಲುಪಿಸಿ

ವಿಜಯಪುರ: ಸರ್ಕಾರ ಜಾರಿಗೊಳಿಸಿದ ಐದೂ ಗ್ಯಾರಂಟಿ ಯೋಜನೆ ಲಾಭ ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ಜಿಪಂ ಸಿಇಒ ರಿಷಿ ಆನಂದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಗೃಹ ಲಕ್ಷಿ$್ಮ ಯೋಜನೆ ಶೇ.96ರಷ್ಟು ಪ್ರಗತಿ ಸಾಧಿಸಿದೆ. ಅನ್ನಭಾಗ್ಯ ಯೋಜನೆಯಡಿ ನಿಗದಿತ ಪ್ರಮಾಣ ಮತ್ತು ಸಮಯಕ್ಕೆ ಸರಿಯಾಗಿ ಅಕ್ಕಿ ವಿತರಿಸಬೇಕು. ಈ ನಿಟ್ಟಿನಲ್ಲಿ ತಾಲೂಕು ಮಟ್ಟದಲ್ಲಿ ಸಭೆ ನಡೆಸಿ ಯಾವುದೇ ಸಮಸ್ಯೆ ಇದ್ದಲ್ಲಿ ತುರ್ತಾಗಿ ತಮ್ಮ ಗಮನಕ್ಕೆ ತರುವಂತೆ ಹೇಳಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಇಲಿಯಾಸ್​ ಅಹ್ಮದ ಬೋರಾಮಣಿ ಮಾತನಾಡಿ, ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಪ್ರಾರಂಭವಾದಾಗಿನಿಂದ ಇವರೆಗೂ ಶಕ್ತಿ ಯೋಜನೆಯಡಿ 8.58 ಕೋಟಿ ಮಹಿಳೆಯರು ಬಸ್ಸಿನಲ್ಲಿ ಉಚಿತ ಪ್ರಯಾಣಿಸಿರುವುದಕ್ಕೆ 264.35 ಕೋಟಿ ರೂ., ಗೃಹಜ್ಯೋತಿ ಯೋಜನೆಯಡಿ 4.36 ಲಕ್ಷ ಕುಟುಂಬಗಳ ವಿದ್ಯುತ್​ ಸೌಲಭ್ಯಕ್ಕಾಗಿ 233.61 ಕೋಟಿ ರೂ., ಅನ್ನಭಾಗ್ಯ ಯೋಜನೆಯಡಿ ರೂ. 15.84 ಲಕ್ಷ ಕುಟುಂಬಗಳಿಗೆ ಉಚಿತವಾಗಿ 5 ಕೆಜಿ ಅಕ್ಕಿ ಹಾಗೂ 5 ಕೆಜಿ ಅಕ್ಕಿ ಮತ್ತು 322.60 ಕೋಟಿ ರೂ. ಸಂದಾಯ ಮಾಡಲಾಗಿದೆ ಎಂದರು.

ಇನ್ನು ಗೃಹಲಕ್ಷಿ$್ಮ ಯೋಜನೆಯಡಿ ಪ್ರತಿ ಕುಟುಂಬದ ಯಜಮಾನಿಗೆ 2000 ರೂ.ಗಳಂತೆ 4.82 ಲಕ್ಷ ಫಲಾನುಭವಿಗಳಿಗೆ 1001.81 ಕೋಟಿ ರೂ. ಮತ್ತು ನಿರುದ್ಯೋಗಿ ಪದವಿ ಯುವಕರಿಗೆ ಯುವನಿಧಿ ಯೋಜನೆಯಡಿ ಪ್ರತಿ ತಿಂಗಳು 3000 ರೂ.ಗಳನ್ನು 17,499 ಫಲಾನುಭವಿಗಳಿಗೆ ಹಾಗೂ ಡಿಪ್ಲೋಮಾ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು 1500 ರೂ.ಗಳಂತೆ 176 ಫಲಾನುಭವಿಗಳಿಗೆ 5.28 ಕೋಟಿ ರೂ.ಗಳ ಸರ್ಕಾರ ಅನುದಾನ ಒದಗಿಸಿದೆ ಎಂದು ಮಾಹಿತಿ ನೀಡಿದರು.

ಜಿಪಂ ಮುಖ್ಯ ಯೋಜನಾಧಿಕಾರಿ ಎನ್​.ಕೆ. ಗೋಠೆ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸದ್ದಾಂ ಕುಂಟೋಜಿ, ಹೊನ್ನಮಲ್ಲ ಸಾರವಾಡ ಮತ್ತಿತರರಿದ್ದರು.