DR RAVI KUMAR NAYAK  
ಜಿಲ್ಲೆ

ಪ್ರಾಂಶುಪಾಲರ ಮೇಲೆ ಕ್ರಮಕ್ಕೆ ಒತ್ತಾಯ

Raichur - Reporter - Rachhai Swamy

ರಾಯಚೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಯಂಕಣ್ಣ ಅವರು ಇಲಾಖೆ ಮತ್ತು ವಿಶ್ವವಿದ್ಯಾಲಯ ನಿಯಮಗಳನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿದ್ದಾರೆಂದು ಎಸ್ಸಿಎಸ್ಟಿ ದೌರ್ಜನ್ಯ ಪ್ರತಿ ಬಂಧಕ ಅಧಿನಿಯಮ ಜಾಗೃತಿ ಸಮಿತಿ ಸದಸ್ಯ ಡಾ.ರವಿಕುಮಾರ ನಾಯಕ ಆರೋಪಿಸಿದರು.

ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2025-26 ಸಾಲಿನಿಂದ ರಾಜ್ಯದಲ್ಲಿ ಎಸ್‌ಇಪಿ ಜಾರಿಗೊಳಿಸಲಾಗಿದೆ. ಆದರೆ ಡಾ.ಯಂಕಣ್ಣ ಇವರು ಎನ್‌ಇಪಿ ಅನ್ವಯ ಕನ್ನಡದೊಂದಿಗೆ ಇಂಗ್ಲೀಷ್ ಭಾಷೆ ಕಡ್ಡಾಯಗೊಳಿಸಿರುವದು ಅನೇಕ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ತೊಂದರೆ ಕಾರಣವಾಗಿದೆ. ಬೇರೆ ಕಾಲೇಜುಗಳಲ್ಲಿ ಇಲ್ಲದೇ ಇರುವ ನಿಯಮಗಳನ್ನು ಜಾರಿಗೊಳಿಸುತ್ತಿದ್ದಾರೆ. ಬಯೋಮೆಟ್ರಿಕ್ ವ್ಯವಸ್ಥೆಯ ಮೇಲೆ ಸಿಬ್ಬಂದಿಗಳ ವೇತನ ಪಾವತಿಸಬೇಕೆನ್ನುವ ನಿಯಮವಿದ್ದರೂ ಬಯೋಮೆಟ್ರಿಕ್ ವ್ಯವಸ್ಥೆಯೇ ಅನುಸರಿಸುತ್ತಿಲ್ಲ.

ಅತಿಥಿ ಉಪನ್ಯಾಸಕರಾಗಿ ಆಯ್ಕೆಯಾದ ಅಭ್ಯರ್ಥಿಗಳು ಬೇರೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುವಂತಿಲ್ಲ ಎಂಬ ನಿರ್ಬಂಧವಿದ್ದರು ಖಾಸಗಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಲು ಅತಿಥಿ ಉಪನ್ಯಾಸಕರಿಗೆ ಅವಕಾಶ ನೀಡಿದ್ದಾರೆ. ಆದರಿಂದ ಇವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಹನುಮಂತ ನಾಯಕ, ಶರಣುನಾಯಕ ಇದ್ದರು.