ಮುಂಡರಗಿ ಪಟ್ಟಣದಲ್ಲಿ ತಾಲೂಕು ಸಾರ್ವಜನಿಕ ಹೋರಾಟ ವೇದಿಕೆ ಆಶ್ರಯದಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸೋಮವಾರ ಬೆಂಗಳೂರು ಚಲೋ ಪ್ರತಿಭಟನೆಗೆ ಚಾಲನೆ ನೀಡಲಾಯಿತು. ಬಸವರಾಜ ನವಲಗುಂದ, ರಮೇಶ ರಾಮೇನಹಳ್ಳಿ, ರವಿ ಪಾಟೀಲ ಇತರರಿದ್ದರು. 
ಜಿಲ್ಲೆ

ಬರ ಪರಿಹಾರ ಸಮರ್ಪಕ ವಿತರಣೆಗೆ ಆಗ್ರಹ

ಸೋಮನಾಥ ರೆಡ್ಡಿ

ಮುಂಡರಗಿ: ಬರ ಪರಿಹಾರ ವಿತರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಾಲೂಕು ಸಾರ್ವಜನಿಕ ಹೋರಾಟ ವೇದಿಕೆ ವತಿಯಿಂದ ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ಬೆಂಗಳೂರು ಚಲೋ ಪ್ರತಿಭಟನೆಗೆ ಚಾಲನೆ ನೀಡಲಾಯಿತು.

ವೇದಿಕೆ ಸಂಚಾಲಕ ಬಸವರಾಜ ನವಲಗುಂದ ಮಾತನಾಡಿ, ತಾಲೂಕಿನಲ್ಲಿ ಬರ ಪರಿಹಾರ ಎಲ್ಲ ರೈತರ ಬ್ಯಾಂಕ್ ಖಾತೆಗೆ ಸಮರ್ಪಕವಾಗಿ ಹಂಚಿಕೆಯಾಗಿಲ್ಲ. ಎಲ್ಲ ರೈತರಿಗೆ ಬರ ಪರಿಹಾರ ವಿತರಿಸಬೇಕು. ರೈತರ ರಾಷ್ಟ್ರೀಕೃತ ಬ್ಯಾಂಕಿನ ಸಾಲ ಮನ್ನಾ ಮಾಡಬೇಕು. ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದ್ದರಿಂದ ಜನಸಾಮಾನ್ಯರಿಗೆ ಹೊರೆಯಾಗಿದೆ. ಹೀಗಾಗಿ ತೈಲ ದರ ಇಳಿಸಬೇಕು. ಗದಗ-ಹರಪನಹಳ್ಳಿ ರೈಲು ಮಾರ್ಗ ರಚಿಸಬೇಕು ಎಂದು ಆಗ್ರಹಿಸಿ ಬೆಂಗಳೂರು ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಜೂ.18ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ನಡೆಸಲಾಗುತ್ತದೆ ಎಂದರು.
ರಮೇಶ ರಾಮೇನಹಳ್ಳಿ, ರವಿ ಪಾಟೀಲ, ಶರಣಪ್ಪ ಹೊಂಬಳಗಟ್ಟಿ, ಶಿವಯೋಗಿ ಹಿರೇಮಠ ಇತರರು ಇದ್ದರು.