ಬೆಳಗಾವಿ: ಸಂಸತ್‌ನಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರನ್ನು ನಿಂದಿಸಿದರು ಕೇಂದ್ರ ಸಚಿವ ಅಮಿತ್ ಷಾ ಹಾಗೂ ಸುವರ್ಣ ವಿಧಾನಸೌಧದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ವಿಪ ಸದಸ್ಯ ಸಿ.ಟಿ. ರವಿ ಅವರನ್ನು ವಜಾ ಮಾಡುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಸೋಮವಾರ ಬೆಳಗಾವಿ ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ಗುಂಡು ತಳವಾರ, ಗಿರೇಪ್ಪ ಕೋಲಕಾರ, ಅಂಬಿಕಾ ಚಲವಾದಿ, ಸಾವಿತ್ರಿ ಮಾದಾರ ಇತರರಿದ್ದರು.