ಬಳ್ಳಾರಿ: ಬಗರ್‌ಹುಕುಂ ಸಾಗುವಳಿದಾರರಿಗೆ ಪಟ್ಟಾ ವಿತರಿಸಲು ಆಗ್ರಹಿಸಿ ಎಐಕೆಕೆಎಂಎಸ್ ರೈತ ಸಂಘಟನೆ ವತಿಯಿಂದ ನೂತನ ಜಿಲ್ಲಾಡಳಿತ ಭವನದ ಮುಂದೆ ಶುಕ್ರವಾರ ಪ್ರತಿಭಟನೆ ಮಾಡಲಾಯಿತು.
ಸಂಘಟನೆ ಜಿಲ್ಲಾಧ್ಯಧ್ಯಕ್ಷ ಗೋವಿಂದ್ ಮಾತನಾಡಿ, ತಾಲೂಕಿನಲ್ಲಿ 3500 ಕ್ಕೂ ಹೆಚ್ಚಿನ ರೈತರು ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿದ್ದಾರೆ. ರಾಜ್ಯದಲ್ಲಿ 12 ಲಕ್ಷಕ್ಕೂ ಹೆಚ್ಚಿನ ರೈತರು ಸಾಗುವಳಿ ಮಾಡುತ್ತಿದ್ದಾರೆ. ಈ ರೈತರು ತಾವು ಈ ಭೂಮಿಯಲ್ಲಿ ಬೆಳೆದ ಬೆಳೆಯನ್ನು ಇಡೀ ದೇಶಕ್ಕೆ ನೀಡುತ್ತಿದ್ದಾರೆ. ಅವರು ತಮ್ಮ ಕುಟುಂಬದ ಜೀವನೋಪಾಯಕ್ಕಾಗಿ ತುಂಡು ಭೂಮಿಯನ್ನೇ ನೆಚ್ಚಿಕೊಂಡಿದ್ದಾರೆ. ಹಾಗಾಗಿ ಸರ್ಕಾರ ತ್ವರಿತವಾಗಿ ಬಳ್ಳಾರಿ ತಾಲೂಕಿನಲ್ಲಿ ಎಲ್.ಜಿ.ಸಿ ಸಮಿತಿ ರಚಿಸಿ ಬಗರ್ ಹುಕುಂ ಸಾಗುವಳಿದಾರರಿಗೆ ಪಟ್ಟಾ ವಿತರಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಸಮಿತಿ ಸದಸ್ಯ ಈ.ಹನುಮಂತಪ್ಪ, ರೈತರಾದ ರೆಹೆಮಾನ್, ಪಾರ್ವತಿ, ಹನುಮಂತಪ್ಪ ಗೂಡುದುರು, ಕಾಡಮ್ಮ, ಜಾನಮ್ಮ, ನಿಂಗಪ್ಪ, ಈರಣ್ಣ, ಚಿದಾನಂದ ಸೇರಿದಂತೆ ಇತರರು ಇದ್ದರು.