ಧಾರವಾಡ: ಜಿಲ್ಲೆಯೂ ಸೇರಿ ರಾಜ್ಯಕ್ಕೆ ಬರಬೇಕಿರುವ ಬರ ಪರಿಹಾರವನ್ನು ಕೇಂದ್ರ ಸರ್ಕಾರ ತಕ್ಷಣ ಬಿಡುಗಡೆ ಮÁಡಬೇಕು ಎಂದು ಕೆಪಿಸಿಸಿ ರಾಜ್ಯ ವಕ್ತಾರ ಪಿ.ಎಚ್. ನೀರಲಕೇರಿ ಒತ್ತಾಯಿಸಿದ್ದಾರೆ.
ಪ್ರಕಟಣೆ ನೀಡಿರುವ ಅವರು, 18 ಸಾವಿರ ಕೋಟಿ ರೂಪಾಯಿ ಬರ ಪರಿಹಾರಕ್ಕಾಗಿ ಕರ್ನಾಟಕದಿಂದ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ, ಕೇಂದ್ರ ಇದುವರೆಗೆ ನಯಾಪೈಸೆ ನೀಡದಿರುವುದು ಕೇಂದ್ರ ಸರ್ಕಾರ ರೈತರನ್ನು ಹೇಗೆ ನಡೆಸಿಕೊಳ್ಳುತ್ತದೆ ಎಂಬುದಕ್ಕೆ ನಿದರ್ಶನ. ಅಲ್ಲದೆ, 42 ಸಾವಿರ ಕೋಟಿ ರೂಪಾಯಿ ಜಿಎಸ್‌ಟಿ ಪಾಲು ಸೇರಿ ಇತರ ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಕೂಡ ಬಾಕಿ ಇದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವತಃ ಪ್ರಧಾನಿ ಮೋದಿ ಅವರನ್ನು ಭೇಟಿಯಾದರೂ ಸ್ಪಂದನೆ ಇಲ್ಲ. ರಾಜ್ಯದ 25 ಬಿಜೆಪಿ ಸಂಸದರು ಏನು ಮಾಡುತ್ತಿದ್ದಾರೆ? ಅವರಿಗೆ ರೈತರ ಮತ ಬೇಡವೇ ಎಂದು ಪ್ರಶ್ನಿಸಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಕೃಷಿ ಇಲಾಖೆಯ ಹಿರಿಯ ಅಽಕಾರಿಗಳನ್ನು ಭೇಟಿ ಮಾಡಿ ಪರಿಹಾರ ಬಿಡುಗಡೆಗೆ ಮನವಿ ಮಾಡಿದ್ದಾರೆ. ಇಷ್ಟಾದರೂ ಕೇಂದ್ರ ಬರ ಪರಿಹಾರ ಬಿಡುಗಡೆ ಮಾಡಿಲ್ಲ. ಧಾರವಾಡ ಜಿಲ್ಲೆಗೆ 212 ಕೋಟಿ ರೂ. ಬರ ಪರಿಹಾರದ ಹಣ ಬರಬೇಕು. ಕೂಡಲೇ ಪರಿಹಾರ ಬಿಡುಗಡೆ ಮಾಡಲು ಸಂಸದ ಪ್ರಲ್ಹಾದ ಜೋಶಿ ಅವರನ್ನು ಒತ್ತಾಯಿಸಿದ್ದಾರೆ.