ಜಿಲ್ಲೆ

ಪ್ರತ್ಯೇಕ ಕರಾವಳಿ ವಲಯ ನಿಯಮ ರಚನೆಗೆ ಆಗ್ರಹ

ಇಂದಿರಾ ಎನ್ ಕೆ

ಕುಂದಾಪುರ: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಪ್ರತ್ಯೇಕ ವಲಯ ನಿಯಮಾವಳಿಗಳನ್ನು ಅನುಷ್ಠಾನಗೊಳಿಸಲು ಮತ್ತು ಪ್ರಾಧಿಕಾರ ಕಚೇರಿಯಲ್ಲಿ ತಾಂತ್ರಿಕ ಸಿಬ್ಬಂದಿಯನ್ನು ಹೆಚ್ಚಿಸಲು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ನಗರಾಭಿವೃದ್ಧಿ ಪ್ರಾಧಿಕಾರಗಳ ಒಕ್ಕೂಟದ ನಿಯೋಗ ನಗರ ಮತ್ತು ಗ್ರಾಮಾಂತರ ಯೋಜನೆಯ ಮೈಸೂರು ವಿಭಾಗದ ಜಂಟಿ ನಿರ್ದೇಶಕಿ ಡಾ.ಪಂಕಜ ಎಂ.ಎಸ್. ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.

ಭಿನ್ನವಾದ ಭೌಗೋಳಿಕ ಹಿನ್ನೆಲೆ ಹೊಂದಿರುವ ದಕ್ಷಿಣ ಮತ್ತು ಉಡುಪಿ ಜಿಲ್ಲೆಗಳಿಗೆ ಪ್ರತ್ಯೇಕ ಕರಾವಳಿ ವಲಯ ನಿಯಮಾವಳಿ ರಚಿಸಬೇಕೆಂದು ಒತ್ತಾಯಿಸಿದ ನಿಯೋಗವು, 9/11 ನಿಯಮಗಳ ಸರಳೀಕರಣ, ಕಟ್ ಕನ್ವರ್ಷನ್, ರಸ್ತೆ ಮಾರ್ಜಿನ್ ಕಡಿತಗೊಳಿಸಲು ಅಗ್ರಹಿಸಿತು. ಕಡತ ವಿಲೇವಾರಿಗಳನ್ನು ತ್ವರಿತಗೊಳಿಸಲು ಹೆಚ್ಚಿನ ತಾಂತ್ರಿಕ ಸಿಬ್ಬಂದಿ ನಿಯೋಜಿಸುವಂತೆ ಮನವಿ ಮಾಡಿದರು.

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸದಾಶಿವ ಉಳ್ಳಾಲ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನಕರ ಹೇರೂರು, ಕುಂದಾಪುರ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ವಿನೋದ್ ಕ್ರಾಸ್ಟೊ, ಸುಳ್ಯ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಮುಸ್ತಾಫ್, ಮೂಡುಬಿದಿರೆ ನಗರ ಪ್ರಾಧಿಕಾರ ಅಧ್ಯಕ್ಷ ಹರ್ಷವರ್ಧನ ಜೈನ್ ಇನ್ನಿತರರು ನಿಯೋಗದಲ್ಲಿದ್ದರು.