ಮಂಗಳೂರು: ರಾಜ್ಯದಲ್ಲಿ ಜಾನುವಾರು ಹತ್ಯೆ ನಿಷೇಧ ಮತ್ತು ಸಂರಕ್ಷಣಾ ಕಾಯ್ದೆಯನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸುವಂತೆ ಒತ್ತಾಯಿಸಿ ಮತ್ತು ಅಕ್ರಮವಾಗಿ ಗೋ ಸಾಗಾಟ ಮಾಡುವವರ ವಿರುದ್ಧ ಕಟ್ಟು ನಿಟ್ಟಿನ ಕ್ರಮಕ್ಕೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ಸುರತ್ಕಲ್ ಘಟಕ ಸುರತ್ಕಲ್ ಪೊಲೀಸ್ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.
ಸುರತ್ಕಲ್ ವ್ಯಾಪ್ತಿಯಲ್ಲಿ ಅಕ್ರಮ ಗೋ ಸಾಗಾಟ ಮತ್ತು ಗೋ ಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಇದನ್ನು ಪೊಲೀಸರು ಮಟ್ಟಹಾಕಬೇಕು. ರಾಜ್ಯದಲ್ಲಿ ಗೋ ಹತ್ಯ ನಿಷೇಧ ಕಾಯ್ದೆ ಜಾರಿಯಲ್ಲಿ ಇರುವುದರಿಂದ ಗೋ ಕಳ್ಳತನ, ಅಕ್ರಮ ಗೋ ಸಾಗಟ, ಗೋವುಗಳನ್ನು ಕಡಿಯಲು ಅವುಗಳನ್ನು ಅಕ್ರಮವಾಗಿ ಕೂಡಿ ಇಟ್ಟು ನಂತರ ಗೋ ಹತ್ಯೆ ಮಾಡುವವರನ್ನು, ಅದರ ಸಾಗಟ ಮಾಡುವವರನ್ನು, ಅದಕ್ಕೆ ಸ್ಧಳಗಳನ್ನು ಒದಗಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸುರತ್ಕಲ್ ವ್ಯಾಪ್ತಿಯ ಸೂಕ್ಷ್ಮ ಪ್ರದೇಶದಲ್ಲಿ ಪೋಲಿಸ್ ಚೆಕ್ ಪೋಸ್ಟ್ ಹಾಕಿ ಗೋ ಕಳ್ಳರನ್ನು ಬಂಧಿಸಿ ಕ್ರಮಕ್ಕೆ ಮುಂದಾಗಬೇಕು ಎಂದು ಹಿಂದೂ ಜಾಗರಣ ವೇದಿಕೆ ಮನವಿಯ ಮೂಲಕ ಒತ್ತಾಯಿಸಿದೆ. ಮನವಿ ಸಲ್ಲಿಸುವ ವೇಳೆ ಸುರತ್ಕಲ್ ಹಿಂದು ಜಾಗರಣ ವೇದಿಕೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.