ತಾವರಗೇರಾ ಹೊರವಲಯದ ಬುದ್ಧವಿಹಾರದಲ್ಲಿ ಏರ್ಪಡಿಸಿದ್ದ ಅತಿಥಿ ಶಿಕ್ಷಕರ ಜಿಲ್ಲಾ ಸಮಾವೇಶ ಕಾರ್ಯಕ್ರಮದಲ್ಲಿ ಶಾಸಕ ದೊಡ್ಡನಗೌಡ ಪಾಟೀಲ ಮಾತನಾಡಿದರು. ಪ್ರಮುಖರಾದ ಹನಮಂತಪ್ಪ, ಬಸವರಾಜ, ಶರಣಪ್ಪ, ರಾಜೇಂದ್ರ, ಗ್ಯಾನಪ್ಪ, ಪಂಪಾಪತಿ, ಬೀರಪ್ಪ ಇತರರಿದ್ದರು. 
ಜಿಲ್ಲೆ

ನೂರು ಅತಿಥಿ ಶಿಕ್ಷಕರ ನೇಮಕಕ್ಕೆ ಬೇಡಿಕೆ

ತಾವರಗೇರಾ: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಮಕ್ಕಳಿಗೆ ಸಮರ್ಪಕವಾಗಿ ಶಿಕ್ಷಣ ಸಿಗಲಿ ಎಂಬ ಕಾರಣದಿಂದ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ಶಾಸಕ ಹಾಗೂ ವಿಧಾನಸಭೆ ಪ್ರತಿ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಹೇಳಿದರು.

ಪಟ್ಟಣದ ಹೊರವಲಯದ ಬುದ್ಧ ವಿಹಾರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕೊಪ್ಪಳ ಜಿಲ್ಲಾ ಅತಿಥಿ ಶಿಕ್ಷಕರ ಸಮ್ಮೇಳನದಲ್ಲಿ ಮಾತನಾಡಿದರು. ನೂರು ಅತಿಥಿ ಶಿಕ್ಷಕರ ನೇಮಕಕ್ಕೆ ಬೇಡಿಕೆ ಇತ್ತು. ಸದ್ಯ ಅರವತ್ತು ಶಿಕ್ಷಕರ ನೇಮಕ ಮಾಡಲಾಗಿದೆ. ಬೇಡಿಕೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.

ರಾಜ್ಯ ಅತಿಥಿ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಎಸ್.ಹನುಮಂತಪ್ಪ, ಪ್ರಧಾನ ಕಾರ್ಯದರ್ಶಿ ಬಸವರಾಜ ಕರಡಿಗುಡ್ಡ, ಮುನಿರಾಬಾದ್ ಡಯಟ್‌ನ ಉಪನ್ಯಾಸಕ ರಾಜೇಂದ್ರ ಬೆಳ್ಳಿ, ಪ್ರಮುಖರಾದ ಪಂಪಾಪತಿ ಕೊರಳ್ಳಿ, ಗ್ಯಾನಪ್ಪ ರಾಂಪೂರ, ಬೀರಪ್ಪ ಅಂಡಗಿ, ಎಸ್.ಶರಣಪ್ಪ ಇತರರಿದ್ದರು.