ರಾಮದುರ್ಗ: ಗ್ರಾಪಂಗಳಲ್ಲಿ ಕೆಲಸ ಮಾಡುತ್ತಿರುವ ನೌಕರರ ಸುಮಾರು 19 ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನಿರಂತರ ಧರಣಿ ಸತ್ಯಾಗ್ರಹ ನಡೆಸಿದರೂ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳದ್ದನ್ನು ಖಂಡಿಸಿ ೆ.20 ರಂದು ಮುಖ್ಯಮಂತ್ರಿಗಳ ಮನೆ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ ಎಂದು ಗ್ರಾಪಂ ನೌಕರರ ಸಂಘದ ಜಿಲ್ಲಾಧ್ಯಕ್ಷ ಗೈಬು ಜೈನೇಖಾನ್ ಹೇಳಿದರು.
ಪಟ್ಟಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಾಯತ್ ರಾಜ್ ಇಲಾಖೆಯ ಗ್ರಾಪಂ ಡಾಟಾ ಎಂಟ್ರಿ ಆಪರೇಟರ್, ಕ್ಲರ್ಕ್, ಸಿಪಾಯಿಗಳಿಗೆ ಸೇವಾ ಭದ್ರತೆ ಒದಗಿಸಬೇಕು. ವೇತನ ಪರಿಷ್ಕರಣೆ ಮಾಡಿ, ಮೂಲಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. ಈ ಬಾರಿ ಬೇಡಿಕೆ ಈಡೇರಿಸುವವರೆಗೆ ಧರಣಿ ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಎಚ್ಚರಿಕೆ ನೀಡಿದರು.
ಸಿಐಟಿಯು ಮುಖಂಡರಾದ ನಾಗಪ್ಪ ಸಂಗೊಳ್ಳಿ, ವೀರಭದ್ರ ಕಂಪ್ಲಿ, ದೀಪಕ ಭೋವಿ, ಗ್ರಾಪಂ ನೌಕರರ ಸಂಘದ ಪದಾಧಿಕಾರಿಗಳು ಮತ್ತು ಸಿಐಟಿಯು ಮುಖಂಡರಿದ್ದರು.