ಜಿಲ್ಲೆ

ಬಿಕ್ಕೋಡಿನಲ್ಲಿ ವಿದ್ಯುತ್ ಉಪ ಕೇಂದ್ರ ತೆರೆಯಲು ಒತ್ತಾಯ

ಲಲಾಟಾಕ್ಷ ಎಸ್

ಬೇಲೂರು: ಮಲೆನಾಡು ಭಾಗದಲ್ಲಿ ಪ್ರತಿನಿತ್ಯ ವಿದ್ಯುತ್ ಕಡಿತದಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು ಬಿಕ್ಕೋಡಿನಲ್ಲಿ ವಿದ್ಯುತ್ ಉಪ ಕೇಂದ್ರ ತೆರೆಯಲು ಸರ್ಕಾರ ಮುಂದಾಗಬೇಕೆಂದು ಒತ್ತಾಯಿಸಿ ಹೋರಾಟಗಾರ ತೀರ್ಥಪ್ಪ ಬೇಲೂರು ಪಟ್ಟಣದ ಸೆಸ್ಕ್ ಕಚೇರಿ ಮುಂಭಾಗ ಮಂಗಳವಾರ ಪ್ರತಿಭಟಿಸಿದರು.


ತಾಲೂಕಿನ ಬಿಕ್ಕೋಡು ಭಾಗದಲ್ಲಿ ರಾತ್ರಿ ಸಮಯ ವಿದ್ಯುತ್ ಇಲ್ಲದೆ ಬೆಳೆಗಾರರು, ಗ್ರಾಮಸ್ಥರಿಗೆ ತೊಂದರೆಯಾಗಿದೆ. ಹಾಗಾಗಿ ವಿದ್ಯುತ್ ಉಪ ಕೇಂದ್ರ ತೆರೆದರೆ ಈ ಭಾಗದ ಜನರಿಗೆ ಅನುಕೂಲವಾಗುತ್ತದೆ. ಹಲವು ಬಾರಿ ಸರ್ಕಾರ ಮತ್ತು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಭಾಗದಲ್ಲಿ ಕಾಡಾನೆಗಳ ಉಪಟಳ ಇರುವುದರಿಂದ ರಾತ್ರಿ ಸಮಯದಲ್ಲಿ ಮನೆಯಿಂದ ಹೊರ ಬರದಂತಹ ಸ್ಥಿತಿ ನಿರ್ಮಾಣವಾಗಿದೆ. ತಕ್ಷಣ ಜನಪ್ರತಿನಿಧಿಗಳು, ಸಂಬಂಧಿಸಿದ ಅಧಿಕಾರಿಗಳು ಬಿಕ್ಕೋಡಿನಲ್ಲಿ ವಿದ್ಯುತ್ ಉಪಕೇಂದ್ರ ತೆರೆಯಲು ಮುಂದಾಗಬೇಕು ಎಂದು ಮನವಿ ಮಾಡಿದರು.