ಗೋಕಾಕ ನಗರದ ಘಟಪ್ರಭಾ ನದಿ ಪ್ರವಾಹಪೀಡಿತ ಪ್ರದೇಶಕ್ಕೆ ಶಾಸಕ ರಮೇಶ ಜಾರಕಿಹೊಳಿ ಭೇಟಿ ನೀಡಿ ಪರಿಶೀಲಿಸಿದರು. 
ಜಿಲ್ಲೆ

ಘಟಪ್ರಭಾ ನದಿಗೆ ತಡೆಗೋಡೆ ನಿರ್ಮಿಸಲು ಆಗ್ರಹ

ಗೋಕಾಕ: ಪ್ರವಾಹ ತಡೆಯಲು ಶಾಶ್ವತ ಪರಿಹಾರಕ್ಕಾಗಿ ಘಟಪ್ರಭಾ ನದಿಗೆ ರಕ್ಷಣಾ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಸರ್ಕಾರ ಟೆಂಡರ್ ಕರೆಯಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಆಗ್ರಹಿದರು. ನಗರದಲ್ಲಿ ಘಟಪ್ರಭಾ ನದಿ ಪ್ರವಾಹ ಪ್ರದೇಶಗಳಿಗೆ ಗುರುವಾರ ಭೇಟಿ ನೀಡಿ ಪರಿಶೀಲಿ, ನಾವು ವಿರೋಧ ಪಕ್ಷದಲ್ಲಿದ್ದಾಗ ಮಾತನಾಡುವುದು ತಪ್ಪಾಗುತ್ತದೆ. ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದ ಸಂದರ್ಭದಲ್ಲಿ ಘಟಪ್ರಭಾ ನದಿಗೆ ರಕ್ಷಣಾ ತಡೆಗೋಡೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿತ್ತು. ಆದರೆ ಕಾಮಗಾರಿ ಆಗಿಲ್ಲ. ಪ್ರವಾಹ ಇಳಿಮುಖವಾದ ನಂತರ ಸೇತುವೆ ಪರಿಶೀಲಿಸಿ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು. ಸಂತ್ರಸ್ತರ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದರು. ನಗರಸಭೆ ಅಧ್ಯಕ್ಷ ಪ್ರಕಾಶ ಮುರಾರಿ, ಮಾಜಿ ಜಿಪಂ ಸದಸ್ಯ ಟಿ.ಆರ್.ಕಾಗಲ, ತಹಸೀಲ್ದಾರ್ ಡಾ.ಮೋಹನ ಭಸ್ಮೆ, ಡಿವೈಎಸ್‌ಪಿ ರವಿಕುಮಾರ ನಾಯಕ, ತಾಪಂ ಇಒ ಪರಶುರಾಮ ಘಸ್ತೆ, ನಗರಸಭೆ ಪೌರಾಯುಕ್ತ ರವಿ ರಂಗಸುಭೆ ಸೇರಿ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.