ಜಿಲ್ಲೆ

ದೇಶದಾದ್ಯಂತ ವಕ್ಫ್​ ಬೋರ್ಡ್​ ಕಾಯ್ದೆ ರದ್ದುಗೊಳಿಸಲು ಅಗ್ರಹ

ಉಡುಪಿ: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ವಕ್ಫ್​ ಬೋರ್ಡ್​ ತನ್ನ ಕಾನೂನನ್ನು ದುರುಪಯೋಗ ಪಡಿಸಿಕೊಂಡು ಸರ್ಕಾರಿ ಮತ್ತು ಖಾಸಗಿ ಜಮೀನುಗಳನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳುತ್ತಿದೆ. ಆ ಮೂಲಕ ದೇಶದಲ್ಲಿ 8 ಲಕ್ಷ ಎಕರೆ ಜಮೀನನ್ನು ಕಬಳಿಸಿದೆ. ಇದೊಂದು ದೊಡ್ಡ 'ಲ್ಯಾಂಡ್​ ಜಿಹಾದ್​' ಆಗಿದ್ದು, ವಕ್ಫ್​ ಕಾನೂನನ್ನು ರದ್ದುಗೊಳಿಸಿ ಜಮೀನಿನ ನಿಜವಾದ ಮಾಲೀಕರಿಗೆ ಅದರ ಅಧಿಕಾರವನ್ನು ನೀಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ಮುಖಂಡ ವಿಜಯಕುಮಾರ್​ ಆಗ್ರಹಿಸಿದರು.

ಮಂಗಳವಾರ ಜಿಲ್ಲಾಧಿಕಾರಿ ಮುಂಭಾಗ ಸಮಾನ ನಾಗರಿಕ ಸಂಹಿತೆ ಜಾರಿ ಹಾಗೂ ಹಿಂದೂಗಳ ಮೇಲೆ ಆಕ್ರಮಣ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿ ನಡೆದ ಹಿಂದೂ ರಾಷ್ಟ್ರಜಾಗೃತಿ ಆಂದೋಲನದಲ್ಲಿ ಮಾತನಾಡಿದರು.

ದೇಶದಲ್ಲಿ ಸಮಾನ ನಾಗರಿಕ ಕಾನೂನು ಜಾರಿಗೆ ತರುವ ಮೂಲಕ ಅಲ್ಪಸಂಖ್ಯಾತರ ಹೆಸರಿನಲ್ಲಿ ಜಾರಿಯಲ್ಲಿರುವ ಎಲ್ಲಾ ವಿಶೇಷ ಸೌಲಭ್ಯಗಳು, ಕಾನೂನುಗಳು, ಆಯೋಗಗಳು, ಮಂಡಳಿಗಳನ್ನು ರದ್ದುಪಡಿಸಬೇಕು ಎಂದು ಅಗ್ರಹಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್​ ಆಡಳಿತಕ್ಕೆ ಬಂದ ಬೆನ್ನಲ್ಲೇ ಹಿಂದೂ ಕಾರ್ಯಕರ್ತರ ಮೇಲೆ ವಿವಿಧ ರೀತಿಯ ಆಕ್ರಮಣಗಳು ಹೆಚ್ಚಾಗಿವೆ. ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಿ ಅವರಿಗೆ ಥಳಿಸುವುದು ಮತ್ತು ಭಯ ನಿಮಾರ್ಣ ಮಾಡುವ ಪ್ರಕ್ರಿಯೆ ನಡೆಯುತ್ತಿವೆ. ಜೈನ ಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರು ಮತ್ತು ಯುವ ಬ್ರಿಗೇಡ್​ನ ವೇಣುಗೋಪಾಲ ಇವರ ಹತ್ಯೆ ಸೇರಿದಂತೆ ಹಲವು ಘಟನೆಗಳು ಹಿಂದೂ ಸಮಾಜದಲ್ಲಿ ಭಯದ ವಾತಾವರಣ ನಿಮಾರ್ಣ ಮಾಡಿದೆ. ಹೀಗಾಗಿ ಹಿಂದೂ ಕಾರ್ಯಕರ್ತರಿಗೆ, ಹೋರಾಟಗಾರರಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.

ನಂತರ ಅಪರ ಜಿಲ್ಲಾಧಿಕಾರಿ ವೀಣಾ ಬಿ. ಎನ್​. ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಶ್ರೀ ರಾಮ ಸೇನೆಯ ಉಡುಪಿ ಜಿಲ್ಲಾಧ್ಯಕ್ಷ ಜಯರಾಮ ಅಂಬೇಕಲ್​ ಹಾಗೂ ಪ್ರಧಾನ ಕಾರ್ಯದರ್ಶಿ ಶರತ್​ ಮಣಿಪಾಲ, ಭಾರತೀಯ ಜೈನ್​ ಮಿಲನ್​ ಸಂಘಟನೆ ಕಾರ್ಯಾಧ್ಯಕ್ಷ ಕೆ. ಪ್ರಸನ್ನ ಕುಮಾರ್​, ಅಧ್ಯೆ ದೀಪಾರಾಣಿ, ಕಾರ್ಯದರ್ಶಿ ಶ್ವೇತಾ, ಸದಸ್ಯರಾದ ಡಾ. ಆಕಾಶ ರಾಜ್​, ಡಾ. ಮಾನಸ ಜೈನ್​ ಮತ್ತು ವೈ. ಸುಧೀರ್​ ಎಮಾರ್ಳು , ಹಿಂದೂ ಜನಜಾಗೃತಿ ಸಮಿತಿಯ ವಿಶ್ವನಾಥ ನಾಯಕ್​, ರತೀಶ್​ ಶೆಟ್ಟಿ ಹಾಗೂ ದೇವೇಂದ್ರ ಪ್ರಭು ಉಪಸ್ಥಿತರಿದ್ದರು.