democracy day meeting 
ಜಿಲ್ಲೆ

ಅಂಬೇಡ್ಕರ್ ಭವನದಲ್ಲಿ ಪ್ರಜಾಪ್ರಭುತ್ವ ದಿನಾಚರಣೆ

ಶಿವರಾಜ.ಎಂ

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ಟೌನ್ ಡಾ.ಅಂಬೇಡ್ಕರ್ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾಮಟ್ಟದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಏರ್ಪಡಿಸಲಾಗಿದೆ.ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಂಡು, ತಾಲೂಕು ಮಟ್ಟದಲ್ಲಿ ತಹಸೀಲ್ದರ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಸಿ, ಜಿಲ್ಲೆಯ ಎಲ್ಲ ಸರ್ಕಾರಿ ನೌಕರರು ಕಡ್ಡಾಯವಾಗಿ ಸಂವಿಧಾನ ಪೀಠಿಕೆ ಓದು ವೆಬ್ ಸೈಟ್‌ನಲ್ಲಿ ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎನ್.ಶಿವಶಂಕರ್ ಸೂಚಿಸಿದರು.
ದೇವನಹಳ್ಳಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸಂವಿಧಾನದ ತತ್ತ್ವ ಮತ್ತು ಮೌಲ್ಯಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮಕ್ಕೆ ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳಲು ತಿಳಿಸಿದರು. ಸಂವಿಧಾನದ ಮಹತ್ವ ಸಾರಲು ಈ ಕಾರ್ಯಕ್ರಮ ಹಮ್ಮಿಕ್ಕೊಳ್ಳಲಾಗಿದ್ದು ನೋಂದಣಿಗಾಗಿ ಸಮಾಜ ಕಲ್ಯಾಣ ಇಲಾಖೆ ವೆಬ್‌ಸೈಟ್ ತೆರೆದಿದ್ದು, ವೆಬ್ ಸೈಟ್ ಮೂಲಕ ನೋಂದಾಯಿಸಲು ಅವಕಾಶ ಕಲ್ಪಿಸಲಾಗಿರುತ್ತದೆ.
ವೆಬ್‌ಸೈಟ್‌ನಲ್ಲಿ ಜಿಲ್ಲೆಯ ಎಲ್ಲ ಸರ್ಕಾರಿ ಮತ್ತು ಖಾಸಗಿ ಶಾಲೆಗಳು, ಉನ್ನತ ಶಿಕ್ಷಣ, ವೈದ್ಯಕೀಯ ಶಿಕ್ಷಣದ ಅಡಿಯಲ್ಲಿನ ಕಾಲೇಜುಗಳು, ಎಲ್ಲಾ ಕಾರ್ಪೋರೇಟ್ ಕಂಪನಿಗಳು, ಸಾರ್ವಜನಿಕ ಉದ್ಯಮಗಳು, ಕಲ್ಯಾಣ ಸಂಘಗಳು, ಆಸ್ಪತ್ರೆಗಳು, ಕೈಗಾರಿಕೆಗಳು, ಸ್ವಸಹಾಯ ಗುಂಪುಗಳು, ಹಾಲು ಉತ್ಪಾದಕ ಸಹಕಾರ ಸಂಘಗಳ ಸದಸ್ಯರು ಸೇರಿ ಜಿಲ್ಲೆಯ ಎಲ್ಲಾ ಸಾರ್ವಜನಿಕರು ನೋಂದಣಿ ಮಾಡಿಕೊಳ್ಳಬಹುದು ಎಂದು ಹೇಳಿದರು.