ಜಿಲ್ಲೆ

ವಿದ್ಯುನ್ಮಾನ ಮತಯಂತ್ರಗಳ ಪ್ರಾತ್ಯಕ್ಷಿಕೆ

ಮಂಜುನಾಥ ತಿಮ್ಮಯ್ಯ

ಮೈಸೂರು; ಲೋಕಸಭಾ ಚುನಾವಣೆ ಪ್ರಯುಕ್ತ ಭಾರತ ಚುನಾವಣಾ ಆಯೋಗ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕಚೇರಿ ವತಿಯಿಂದ ವಿದ್ಯುನ್ಮಾನ ಮತಯಂತ್ರಗಳ ಪ್ರಾತ್ಯಕ್ಷಿಕೆಗೆ ಸೋಮವಾರ ಚಾಲನೆ ನೀಡಲಾಯಿತು.


ವಿದ್ಯುನ್ಮಾನ ಮತಯಂತ್ರ(ಇವಿಎಂ) ಬಳಕೆ ಹಾಗೂ ಮತದಾನ ಖಾತ್ರಿ ಯಂತ್ರ (ವಿ.ವಿ. ಪ್ಯಾಟ್) ಕಾರ್ಯವೈಖರಿ ಕುರಿತಂತೆ ಪ್ರಾತ್ಯಕ್ಷಿಕೆ ನಡೆಸಲಾಯಿತು.
ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮಾತನಾಡಿ, ಚುನಾವಣಾ ಪ್ರಕ್ರಿಯೆ ವಿಷಯದಲ್ಲಿ ವಿಶ್ವಾಸ ಮೂಡಿಸಲು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.

ಜಿಲ್ಲಾದ್ಯಂತ ಈ ಕಾರ್ಯ ನಡೆಯಲಿದೆ. ಮತದಾರರು ಪಾಲ್ಗೊಂಡು ಕಲ್ಪಿತ ಮತದಾನ ಮಾಡಿ, ಇವಿಎಂ ಯಂತ್ರದಲ್ಲಿ ಮತ ಚಲಾಯಿಸುವ ಹಾಗೂ ಮತದಾನ ಖಾತ್ರಿ ಮಾಡಿಕೊಳ್ಳುವ ಬಗ್ಗೆ ಖುದ್ದು ಮನವರಿಕೆ ಮಾಡಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಟಿ.ಕೆ.ಹರೀಶ್, ಚುನಾವಣಾ ಶಿರಸ್ತೇದಾರ್ ಸುರೇಶ್ ಹಾಗೂ ಚುನಾವಣಾ ಶಾಖೆಯ ಸಿಬ್ಬಂದಿ, ಸಾರ್ವಜನಿಕರು ಇದ್ದರು.