ಕುಂದಾಪುರ: ಭಾರತೀಯ ದಂತ ವೈದ್ಯಕೀಯ ಸಂಘ ಉಡುಪಿ ಶಾಖೆ, ರೋಟರಿ ಕ್ಲಬ್ ಕುಂದಾಪುರ, ನಾರಾಯಣ ವಿಶೇಷ ಮಕ್ಕಳ ಶಾಲೆ ತಲ್ಲೂರು ಆಶ್ರಯದಲ್ಲಿ ಮಣಿಪಾಲ ದಂತ ವೈದ್ಯಕೀಯ ಮಹಾವಿದ್ಯಾಲಯ ಸಹಯೋಗದಲ್ಲಿ ತಲ್ಲೂರಿನ ನಾರಾಯಣ ವಿಶೇಷ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಪಾಲಕರಿಗೆ ದಂತ ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಭಾನುವಾರ ನಡೆಯಿತು.
ಇಂಡಿಯನ್ ಡೆಂಟಲ್ ಅಸೋಸಿಯೇಶನ್ ಅಧ್ಯಕ್ಷ ಡಾ.ಶಬರಿ ಶುಭ ಹಾರೈಸಿದರು. ಇಂಡಿಯನ್ ಡೆಂಟಲ್ ಅಸೋಸಿಯೇಶನ್ ಉಪಾಧ್ಯಕ್ಷ ಡಾ.ರಾಜಾರಾಮ್ ಶೆಟ್ಟಿ, ಕಾಲೇಜ್ ಆಫ್ ಡೆಂಟಲ್ ಸರ್ಜರಿ ಕೆಎಂಸಿ ಮಣಿಪಾಲ್‌ನ ಡಾ.ಶ್ರೇಯಾ, ರೋಟರಿ ಕ್ಲಬ್ ಕಾರ್ಯದರ್ಶಿ ಸಚ್ಚಿದಾನಂದ, ತಲ್ಲೂರು ಗ್ರಾಪಂ ಅಧ್ಯಕ್ಷ ಗಿರೀಶ್ ನಾಯ್ಕ, ಎಸ್‌ಡಿಎಂಸಿ ಅಧ್ಯಕ್ಷ ವಿನಯ್ ಕುಮಾರ್, ತಲ್ಲೂರು ಫ್ಯಾಮಿಲಿ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಸುರೇಶ್ ಟಿ. ಉಪಸ್ಥಿತರಿದ್ದರು. ಸಹಶಿಕ್ಷಕಿ ಪ್ರತಿಮಾ ಸ್ವಾಗತಿಸಿದರು. ಸಹ ಶಿಕ್ಷಕಿ ದೀಪಾ ವಂದಿಸಿದರು. ಮುಖ್ಯ ಶಿಕ್ಷಕಿ ಪ್ರೇಮಾ ಕಾರ್ಯಕ್ರಮ ನಿರೂಪಿಸಿದರು.