Deposit licensed weapons 
ಜಿಲ್ಲೆ

ಲೈಸನ್ಸ್​ ಹೊಂದಿದ ಶಸ್ತ್ರಾಸ್ತ್ರ ಜಮೆಮಾಡಿ

ವಿಜಯಪುರ: ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಸ್ಥಾನಗಳಿಗೆ ಉಪ ಚುನಾವಣೆ ೂಷಣೆಯಾಗಿದ್ದು, ಈ ನಿಟ್ಟಿನಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತಾ ಕ್ರಮವಾಗಿ ಚುನಾವಣೆ ನಡೆಯುವ ಗ್ರಾ.ಪಂ. ವ್ಯಾಪ್ತಿಯ ಆಯುಧ ಲೈಸನ್ಸ್​ದಾರರು ತಮ್ಮಎಲ್ಲ ಶಸಾಸಗಳನ್ನು ಹಾಗೂ ಮದ್ದು ಗುಂಡುಗಳನ್ನು ಕೂಡಲೇ ಸಮೀಪದ ಪೊಲೀಸ್​ ಠಾಣೆಯಲ್ಲಿ ಜಮೆ ಮಾಡುವಂತೆ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ಟಿ. ಭೂಬಾಲನ್​ ಆದೇಶಿಸಿದ್ದಾರೆ.

ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಗ್ರಾಮ ಪಂಚಾಯತಿಯ ಅರಳದಿನ್ನಿ ಹಾಗೂ ಚಿಮ್ಮಲಗಿ ಗ್ರಾಮ ಪಂಚಾಯಿತಿಯ ಚಿಮ್ಮಲಗಿ ೇತ್ರಕ್ಕೆ, ಇಂಡಿ ತಾಲೂಕಿನ ಸಾಲೋಟಗಿ ಹಾಗೂ ಖೇಡಗಿ ಗ್ರಾಮ ಪಂಚಾಯತ್​, ಬಸವನಬಾಗೇವಾಡಿ ತಾಲೂಕಿನ ವಡವಡಗಿ ಗ್ರಾಮ ಪಂಚಾಯಿತಿಯ ನಾಗರಾಳ ಹುಲಿ, ಮುತ್ತಗಿ ಹಾಗೂ ಬ್ಯಾಕೋಡ ಗ್ರಾಮ ಪಂಚಾಯತಿಯ ಜಯವಾಡಗಿ ಉಪ ಚುನಾವಣೆ ನಡೆಯಲಿದೆ.

ಅಲ್ಲದೆ, ಬಬಲೇಶ್ವರ ತಾಲೂಕಿನ ಬೋಳಚಿಕ್ಕಲಕಿ ಗ್ರಾಮ ಪಂಚಾಯತಿಯ ಕಾತ್ರಾಳ ೇತ್ರಕ್ಕೆ, ವಿಜಯಪುರ ತಾಲೂಕಿನ ಕನ್ನೂರ, ನಾಗಠಾಣ, ಜುಮನಾಳ ಹಾಗೂ ಹೊನಗನಹಳ್ಳಿ ಗ್ರಾಮ ಪಂಚಾಯತಿಗೆ, ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮ ಪಂಚಾಯತಿಗೆ, ತಾಳಿಕೋಟೆ ತಾಲೂಕಿನ ಹಿರೂರ ಗ್ರಾಮ ಪಂಚಾಯಿತಿಯ ತಮದಡ್ಡಿ, ಚಡಚಣ ತಾಲೂಕಿನ ಲೋಣಿ ಬಿ.ಕೆ ಮತ್ತು ಚಡಚಣ ತಾಲೂಕಿನ ಹತ್ತಳ್ಳಿ ವ್ಯಾಪ್ತಿಯ ಎಲ್ಲ ಆಯುಧ ಲೈಸನ್ಸ್​ದಾರರು ತಮ್ಮ ಎಲ್ಲ ಶಸ್ತ್ರಾಸ್ತ್ರಗಳನ್ನು ಅಂದರೆ, ಎಸ್​ಬಿಬಿಎಲ್​/ ಡಿಬಿಬಿಎಲ್​, ಬಂದೂಕು, ರೈಫಲ್​, ರಿವಾಲ್ವರ್​ ಹಾಗೂ ಪಿಸ್ತೂಲುಗಳನ್ನು ಹೊಂದಲು ಕೊಟ್ಟ ಲೈಸನ್ಸ್​ಗಳನ್ನು ನ. 6 ರಿಂದ ನ. 26 ರವರೆಗೆ ಸ್ಥಗಿತಗೊಳಿಸಲಾಗಿದ್ದು, ಈ ಆದೇಶವು ಬ್ಯಾಂಕುಗಳು ಮತ್ತು ಫ್ಯಾಕ್ಟರಿಗಳ ಭದ್ರತೆಗೋಸ್ಕರ ಪಡೆದುಕೊಂಡ ಆಯುಧಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ಮಹಾನಗರ ಪಾಲಿಕೆ ಉಪಚುನಾವಣೆ : ಇಲ್ಲಿನ ಮಹಾನಗರ ಪಾಲಿಕೆಯ ವಾರ್ಡ್​ ನಂ. 29ರಲ್ಲಿ ಉಪ ಚುನಾವಣೆ ೂಷಣೆಯಾದ ಹಿನ್ನೆಲೆ ಶಾಂತಿ ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತಾ ಕ್ರಮವಾಗಿ ಚುನಾವಣೆ ನಡೆಯುವ ಪಾಲಿಕೆ ವಾರ್ಡ್​ ನಂ. 29ರ ವ್ಯಾಪ್ತಿಯ ಆಯುಧ ಲೈಸನ್ಸ್​ದಾರರು ತಮ್ಮ ಎಲ್ಲ ಶಸಾಸಗಳನ್ನು ಹಾಗೂ ಮದ್ದು ಗುಂಡುಗಳನ್ನು ಕೂಡಲೇ ಸಮೀಪದ ಪೊಲೀಸ್​ ಠಾಣೆಗೆ ಜಮೆ ಮಾಡುವಂತೆ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ಟಿ. ಭೂಬಾಲನ್​ ಆದೇಶ ಹೊರಡಿಸಿದ್ದಾರೆ.