ಜಿಲ್ಲೆ

ಉಪ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ

ವಿಜಯವಾಣಿ ಸುದ್ದಿಜಾಲ ಧಾರವಾಡ

ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ನ. 21ರಿಂದ 23ರವರೆಗೆ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 21ರಂದು ಬೆಳಗ್ಗೆ 10ರಿಂದ 1.30ರವರೆಗೆ ಮತ್ತು ಮಧ್ಯಾಹ್ನ 2.30ರಿಂದ 5ರವರೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಾರ್ವಜನಿಕರ ಕುಂದುಕೊರತೆ ಅಹವಾಲು ಸ್ವೀಕರಿಸಿ, ವಿಚಾರಣೆ ನಡೆಸುವರು.

ಸರ್ಕಾರಿ ಅಽಕಾರಿ, ನೌಕರರಿಂದ ಕಾನೂನು ರೀತಿ ಆಗಬೇಕಾದ ಕೆಲಸದಲ್ಲಿ ವಿಳಂಬವಾಗಿದ್ದರೆ ಅಥವಾ ಅಽಕಾರಿ, ನೌಕರರು ಕೆಲಸಗಳಲ್ಲಿ ತೊಂದರೆ ಕೊಡುವುದು, ದುರಾಡಳಿತದಲ್ಲಿ ತೊಡಗಿದ್ದರೆ ತೊಂದರೆಗೊಳಗಾದವರು ಸಾಕ್ಷ್ಯಾಧಾರಗಳೊಂದಿಗೆ ಅಹವಾಲು ಸಲ್ಲಿಸಬಹುದು.

ನ. 22ರಂದು ಬೆಳಗ್ಗೆ 10ರಿಂದ 1.30ರವರೆಗೆ ಮತ್ತು ಮಧ್ಯಾಹ್ನ 2.30ರಿಂದ 5ರವರೆಗೆ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಜಿಲ್ಲೆಗೆ ಸಂಬAಽಸಿ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ತನಿಖೆ, ವಿಚಾರಣೆಗೆ ಬಾಕಿ ಇರುವ ಪ್ರಕರಣಗಳನ್ನು ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ವಿಚಾರಣೆ ನಡೆಸಲಾಗುವುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಕರ್ನಾಟಕ ಲೋಕಾಯುಕ್ತ ಜಿಲ್ಲಾ ಅಽÃಕ್ಷಕರು ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.