ಜಿಲ್ಲೆ

ಜಿಲ್ಲೆಯಲ್ಲಿ ಎಲ್ಲೆಂದರಲ್ಲಿ ಪಟಾಕಿ ಮಾರುವಂತಿಲ್ಲ: ಆದೇಶ ಹೊರಡಿಸಿದ ಮಂಡ್ಯ ಜಿಲ್ಲಾಧಿಕಾರಿ

ಕೆ.ಎನ್.ರಾಘವೇಂದ್ರ

ಮಂಡ್ಯ: ಆನೇಕಲ್ ತಾಲೂಕು ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಅಗ್ನಿ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಅದರಂತೆ ಜಿಲ್ಲೆಯಲ್ಲಿ ಎಲ್ಲೆಂದರದಲ್ಲಿ ಪಟಾಕಿ ಮಾಡುವಂತಿಲ್ಲ. ಬದಲಿಗೆ ಅಧಿಕಾರಿಗಳೇ ಸೂಕ್ತ ಜಾಗ ಗುರುತಿಸಲಿದೆ.

ಪಟಾಕಿ ಮಾರಾಟಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ.ಕುಮಾರ ಬುಧವಾರ ಕಟ್ಟುನಿಟ್ಟಿನ ಸೂಚನೆ ಹೊರಡಿಸಿದ್ದಾರೆ. ಅದರಂತೆ ಪಟಾಕಿ ಮಾರಾಟ ಮಾಡಲು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ನಿಗದಿತ ಸ್ಥಳ ಗುರುತಿಸಲಾಗುತ್ತಿದೆ. ಈ ಸಂಬಂಧ ತಾಲೂಕುವಾರು ಸಮಿತಿ ರಚನೆ ಮಾಡಲಾಗಿದ್ದು, ಮೂರು ದಿನದೊಳಗೆ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ.

ಜಿಲ್ಲಾ ಕೇಂದ್ರದಲ್ಲಿ ಉಪವಿಭಾಗಾಧಿಕಾರಿ ಹಾಗೂ ತಾಲೂಕಿನಲ್ಲಿ ಆಯಾಯ ತಹಸೀಲ್ದಾರ್ ಅಧ್ಯಕ್ಷತೆ ಸಮಿತಿ ರಚನೆ ಮಾಡಲಾಗಿದೆ. ಇವರೊಟ್ಟಿಗೆ ವಿವಿಧ ಇಲಾಖೆ ಅಧಿಕಾರಿಗಳನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ. ಅಂತೆಯೇ ಪಟಾಕಿ ಮಾರಾಟ ಮಾಡಲು ಸ್ಥಳವನ್ನು ಈ ಸಮಿತಿ ಪರಿಶೀಲನೆ ನಡೆಸಿ ಸುರಕ್ಷಿತೆ ಬಗ್ಗೆ ವಿವರ ನೀಡಲಿದೆ.