ಜಿಲ್ಲೆ

17 ಕೆ.ಜಿ ತೂಕದ ಮಾದಕ ವಸ್ತು ವಶ: ಜಿಲ್ಲಾ ಎಸ್ಪಿ ನೇತೃತ್ವದಲ್ಲಿ ನಾಶ

ಮಂಡ್ಯ: ಜಿಲ್ಲಾ ಪೊಲೀಸ್ ಇಲಾಖೆಯಿಂದ ಎನ್‌ಡಿಪಿಎಸ್ ಕಾಯ್ದೆಯಡಿ 2024-25ನೇ ಸಾಲಿನಲ್ಲಿ ದಾಖಲಾಗಿದ್ದ 19 ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ 17 ಕೆ.ಜಿ 613 ಗ್ರಾಂ ತೂಕದ ಮಾದಕ ವಸ್ತುಗಳನ್ನು ನಾಶ ಮಾಡಲಾಯಿತು.

ಜಿಲ್ಲಾ ಡ್ರಗ್ಸ್ ಡಿಸ್ಪೋಸಲ್ ಸಮಿತಿ ಮೂಲಕ ಹಾಗೂ ನ್ಯಾಯಾಲಯದ ಆದೇಶದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರ ನೇತೃತ್ವದಲ್ಲಿ ಮೈಸೂರು ಜಿಲ್ಲೆ ಗುಜ್ಜೇನಹಳ್ಳಿ ಗ್ರಾಮದ ಮೆಡಿಕಲ್ ವೇಸ್ಟ್ ಮ್ಯಾನೇಜ್ಮೆಂಟ್ ಪ್ಲಾಂಟ್‌ನಲ್ಲಿ ಸುಟ್ಟು ನಾಶಪಡಿಸಲಾಯಿತು. ಈ ಮಾದಕ ವಸ್ತುಗಳ ಮೌಲ್ಯ 3,60,460 ರೂಗಳಾಗಿದೆ.