ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಲವಾಗಿರುವುದನ್ನು ಖಂಡಿಸಿ ರಾಯಚೂರಿನ ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿ ನಗರ ಘಟಕದಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ಪಕ್ಷದ ಜಿಲ್ಲಾ ಕಾರ್ಯದರ್ಶಿ ಜಿ.ಶಂಕರರೆಡ್ಡಿ, ನಗರ ಘಟಕದ ಅಧ್ಯಕ್ಷ ರಾಘವೇಂದ್ರ ಉಟ್ಕೂರು, ಪದಾಕಾರಿಗಳಾದ ಮಲ್ಲಿಕಾರ್ಜುನ ಹಳ್ಳೂರು, ರಾಮಚಂದ್ರ ಕಡಗೋಲ, ವಿಜಯಕುಮಾರ ಸಜ್ಜನ್, ವಿನಾಯಕರಾವ್, ವೌನೇಶ ಇದ್ದರು. 
ಜಿಲ್ಲೆ

ರಾಜ್ಯದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ

ರಾಚಯ್ಯ ಸ್ವಾಮಿ

ರಾಯಚೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ರಾಜ್ಯದ ಸರ್ಕಾರ ಆಡಳಿತ ನಿರ್ವಹಣೆಯಲ್ಲಿ ವೈಲ್ಯವಾಗಿದೆ ಎಂದು ನಗರದ ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿ ನಗರ ಘಟಕದಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ರಾಜ್ಯದಲ್ಲಿ ನಿತ್ಯ ಕೊಲೆ, ಅತ್ಯಾಚಾರ, ದೌರ್ಜನ್ಯ ಪ್ರಕರಣಗಳು ನಡೆಯುತ್ತಿದದು, ಸರ್ಕಾರದ ವೈಲ್ಯದಿಂದ ಜನರು ಭೀತಿಗೆ ಒಳಗಾಗಿದ್ದಾರೆ. ಮಹಿಳೆಯರು, ಜನರಿಗೆ ರಕ್ಷಣೆ ಇಲ್ಲದಂತಾಗಿದ್ದು, ಆಡಳಿತ ನಿರ್ವಹಣೆಯಲ್ಲಿ ಸಿಎಂ ಸೇರಿದಂತೆ ಸಚಿವರು ವಿಲರಾಗಿದ್ದಾರೆ.
ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಜನರಿಂದ ಕಿತ್ತಿಕೊಂಡ ಹಣವನ್ನು ನೀಡುವ ಮೂಲಕ ಸಾಧನೆ ಎಂಬಂತೆ ಬಿಂಬಿಸಿಕೊಳ್ಳುತ್ತಿದೆ. ಕಾಂಗ್ರೆಸ್ ಪಿಕ್ ಪಾಕೇಟ್ ಸರ್ಕಾರವಾಗಿದೆ. ಎಲ್ಲದರ ಬೆಲೆ ಹೆಚ್ಚಳ ಮಾಡುವ ಮೂಲಕ ಜನರಿಗೆ ಆರ್ಥಿಕ ಹೊರೆ ಉಂಟು ಮಾಡಲಾಗಿದೆ.
ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ನಡೆಯುತ್ತಿದ್ದರೂ ಸರ್ಕಾರ ಸಮರ್ಥನೆಯಲ್ಲಿ ತೊಡಗಿದೆ. ಅದಕ್ಕೆ ವಿದ್ಯಾರ್ಥಿನಿ ನೇಹಾ ಹಿರೇಮಠ ಪ್ರಕರಣ ಸಾಕ್ಷಿಯಾಗಿದೆ. ರಾಜ್ಯಪಾಲಕರು ಕೂಡಲೇ ಮಧ್ಯ ಪ್ರವೇಶಿಸಿ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಜಿ.ಶಂಕರರೆಡ್ಡಿ, ನಗರ ಘಟಕದ ಅಧ್ಯಕ್ಷ ರಾಘವೇಂದ್ರ ಉಟ್ಕೂರು, ಪದಾಕಾರಿಗಳಾದ ಮಲ್ಲಿಕಾರ್ಜುನ ಹಳ್ಳೂರು, ರಾಮಚಂದ್ರ ಕಡಗೋಲ, ವಿಜಯಕುಮಾರ ಸಜ್ಜನ್, ವಿನಾಯಕರಾವ್, ವೌನೇಶ ಪಾಲ್ಗೊಂಡಿದ್ದರು.