ದೇವದುರ್ಗ ಶಾಸಕ ಶಿವನಗೌಡ ನಾಯಕ. 
ಜಿಲ್ಲೆ

40 ವರ್ಷಗಳ ಬೇಡಿಕೆಗೆ ಮನ್ನಣೆ, ಶಾಸಕ ಕೆ.ಶಿವನಗೌಡ ನಾಯಕ ಹೇಳಿಕೆ

Raichur

ದೇವದುರ್ಗ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಕ್ಕೆ ಮೀಸಲು ಹೆಚ್ಚಿಸುವ ಬೇಡಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಂದಿಸಿರುವುದು ಐತಿಹಾಸಿಕ ತೀರ್ಮಾನವಾಗಿದೆ ಎಂದು ಶಾಸಕ ಕೆ.ಶಿವನಗೌಡ ನಾಯಕ ಹೇಳಿದ್ದಾರೆ.

ಎಸ್ಟಿ ಸಮುದಾಯದ ಮೀಸಲಾತಿಯನ್ನು ಶೇ.3ರಿಂದ 7ಕ್ಕೆ ಹೆಚ್ಚಿಸಬೇಕು ಎನ್ನುವುದು 40 ವರ್ಷಗಳ ಬೇಡಿಕೆಯಾಗಿದೆ. ಮೀಸಲಾತಿ ಹೆಚ್ಚಳದ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ಎಸ್ಟಿಯೊಂದಿಗೆ ಎಸ್ಸಿ ಸಮುದಾಯದ ಮೀಸಲು ಪ್ರಮಾಣ ಶೇ.17ಕ್ಕೆ ಹೆಚ್ಚಿಸುವ ಭರವಸೆವೂ ಈಡೇರಿಸಿದೆ. ಇಷ್ಟು ವರ್ಷ ಆಡಳಿತ ನಡೆಸಿದ ಯಾವುದೇ ಪಕ್ಷ ಮಾಡದ ಕೆಲಸವನ್ನು ಬಿಜೆಪಿ ಸರ್ಕಾರ ಮಾಡಿದೆ ಎಂದರು.

ಶ್ರೀ ಪ್ರಸನ್ನಾನಂದ ಸ್ವಾಮೀಜಿ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ. ಪ್ರಧಾನಿ ನರೇಂದ್ರ ಮೋದಿ ಮಾರ್ಗದರ್ಶನದಂತೆ ಸಿಎಂ ಬೊಮ್ಮಾಯಿ ನಿರ್ಧಾರ ಕೈಗೊಂಡಿದ್ದಾರೆ ಶಿವನಗೌಡ ನಾಯಕ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.