ನಾರಾಯಣಪುರ ಜಲಾಶಯದಿಂದ ಕೃಷ್ಣಾನದಿಗೆ 49,331ಕ್ಯೂಸೆಕ್ ನೀರು ಹರಿಸಿದ್ದರಿಂದ ಹೂವಿನಹೆಡಗಿ ಶ್ರೀಗಡ್ಡೆಗೂಳಿ ಬಸವೇಶ್ವರ ದೇವಸ್ಥಾನ ಸಂಪೂರ್ಣ ಮುಳುಗಡೆಯಾಗಿರುವುದು. 
ಜಿಲ್ಲೆ

ಕೃಷ್ಣಾನದಿಗೆ 49,331 ಕ್ಯೂಸೆಕ್ ನೀರು

ದೇವದುರ್ಗ: ನಾರಾಯಣಪುರ ಜಲಾಶಯದಿಂದ ಶುಕ್ರವಾರ ಕೃಷ್ಣಾನದಿಗೆ 49,331 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.

ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ತಾಲೂಕಿನ ಹೂವಿನಹೆಡಗಿ ಶ್ರೀಗಡ್ಡೆಗೂಳಿ ಬಸವೇಶ್ವರ ದೇವಸ್ಥಾನ ಸಂಪೂರ್ಣ ಜಲಾವೃತವಾಗಿದೆ. ಹೂವಿನಹೆಡಗಿ ಗ್ರಾಮಕ್ಕೆ ನೀರು ಸರಬರಾಜು ಮಾಡುವ ಜಾಕ್‌ವೆಲ್‌ಕೂಡ ಮುಳುಗಡೆಯಾಗಿದೆ. ಇದರಿಂದ ಗುರುವಾರ ಸಂಜೆಯಿಂದ ದೇವಸ್ಥಾನದಲ್ಲಿ ಪೂಜೆ ಸ್ಥಗಿತಗೊಳಿಸಲಾಗಿದೆ.

ಮಹಾರಾಷ್ಟ್ರ ಹಾಗೂ ಕೃಷ್ಣಾ ಮೇಲ್ದಂಡೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು ನಾರಾಯಣಪುರ ಜಲಾಶಯದಲ್ಲಿ ದಿನೇದಿನೆ ಒಳಹರಿವು ಹೆಚ್ಚಾಗಿದೆ. ಹೀಗಾಗಿ ಮುಂಜಾಗ್ರತೆ ಕ್ರಮವಾಗಿ ಡ್ಯಾಂನಿಂದ ನದಿಗೆ ನೀರು ಬಿಡುಗಡೆ ಮಾಡಲಾಗುತ್ತಿದೆ. ಜಲಾಶಯದಲ್ಲಿ 45 ಸಾವಿರ ಕ್ಯೂಸೆಕ್ ನೀರು ಒಳಹರಿವು ಇದೆ. 33.13 ಟಿಎಂಸಿ ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 31.50(ಶೇ.94.57)ನೀರಿನ ಸಂಗ್ರಹವಿದೆ. ಎರಡ್ಮೂರು ದಿನಗಳಿಂದ ನದಿಯಲ್ಲಿ ನೀರಿನ ಪ್ರಮಾಣ ಅಧಿಕವಾಗಿದೆ.