ದೇವದುರ್ಗ: ಇಂಧನ ಬೆಲೆ ಏರಿಕೆ ಖಂಡಿಸಿ ತಾಲೂಕಿನ ಜಾಲಹಳ್ಳಿಯ ಪೆಟ್ರೋಲ್ ಬಂಕ್‌ನಲ್ಲಿ ಅರಕೇರಾ ಬ್ಲಾಕ್ ಕಾಂಗ್ರೆಸ್ ಮುಖಂಡರು ಭಾನುವಾರ ಪ್ರತಿಭಟನೆ ನಡೆಸಿದರು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕೆ.ಎಸ್.ನಾಡಗೌಡ ಮಾತನಾಡಿ, ಕೇಂದ್ರ ಸರ್ಕಾರ ಒಳ್ಳೆಯ ದಿನಗಳ ಆಸೆ ತೋರಿಸಿ ಅಧಿಕಾರಕ್ಕೆ ಬಂದು, ಜನ ವಿರೋಧಿ ನೀತಿ ಅನುಸರಿಸುತ್ತಿದೆ. ಇಂಧನ ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ಮೂರಾಬಟ್ಟೆಯಾಗಿದೆ ಎಂದು ಆಕೋಶ ವ್ಯಕ್ತಪಡಿಸಿದರು.
ನಾರಾಯಣಪುರ ಬಲದಂಡೆ ನಾಲೆ ನೀರು ಬಳಸಿ ತಾಲೂಕಿನ ರೈತರು ಸೋನಾ ಮಸೂರಿ ಭತ್ತ ಬೆಳೆಯುತ್ತಿದ್ದಾರೆ. ಇದರಿಂದ ಅನ್ನಕ್ಕೆ ಯಾವುದೇ ಬರವಿಲ್ಲ. ರೈತರಿಗೆ ಪ್ರಮುಖವಾಗಿ ಮಾರುಕಟ್ಟೆ ವ್ಯವಸ್ಥೆ ಇಲ್ಲದ ಕಾರಣ ದಲ್ಲಾಳಿಗಳ ಹಾವಳಿ ಹೆಚ್ಚಾಗಿದೆ. ರಾಜ್ಯ ಸರ್ಕಾರ ರೈತರಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಮಾಡಿಕೊಡಬೇಕು. ಇಂಧನ ಬೆಲೆ ಇಳಿಸಬೇಕು ಎಂದು ಒತ್ತಾಯಿಸಿದರು.