ದೇವದುರ್ಗ ತಾಲೂಕು ಗೂಗಲ್‌ನಲ್ಲಿ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ಸಮಾವೇಶವನ್ನು ಶಾಸಕ ಕೆ.ಶಿವನಗೌಡ ನಾಯಕ ಸೋಮವಾರ ಉದ್ಘಾಟಿಸಿದರು.  
ಜಿಲ್ಲೆ

ಸುಂಕೇಶ್ವರಹಾಳ ರಸ್ತೆ ಅಭಿವೃದ್ಧಿ ಪ್ರಗತಿಯಲ್ಲಿ- ಶಾಸಕ ಕೆ.ಶಿವನಗೌಡ ನಾಯಕ ಹೇಳಿಕೆ

Raichur

ದೇವದುರ್ಗ: ಕೊಪ್ಪರ ಕ್ರಾಸ್‌ನಿಂದ ಗೂಗಲ್ ಮಾರ್ಗವಾಗಿ ಸಂಕೇಶ್ವರಹಾಳ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣಕ್ಕೆ 87ಕಿಮೀ ಪಾದಯಾತ್ರೆ ಮಾಡಲಾಗಿತ್ತು. ಇದೀಗ 110 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಪ್ರಗತಿಯಲ್ಲಿದೆ ಎಂದು ಶಾಸಕ ಕೆ.ಶಿವನಗೌಡ ನಾಯಕ ಹೇಳಿದರು.

ಗೂಗಲ್ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮ ಉದ್ಘಾಟಿಸಿ ಸೋಮವಾರ ಮಾತನಾಡಿದರು. ರಸ್ತೆ ನಿರ್ಮಾಣದಿಂದ ಈ ಭಾಗದ 40ಕ್ಕೂ ಹೆಚ್ಚು ಹಳ್ಳಿಗಳಿಗೆ ಅನುಕೂಲವಾಗಲಿದೆ ಎಂದರು.