ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ 109 ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಸ್.ಕೆ.ಕಾಂತಾ ಅವರಿಗೆ ಡಿ.ದೇವರಾಜ ಅರಸು ಪ್ರಶಸ್ತಿ ಪ್ರದಾನ ಮಾಡಿದರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಶಿವರಾಜ ತಂಗಡಗಿ, ಹೆಚ್.ಸಿ.ಮಹದೇವಪ್ಪ, ಪ್ರಮುಖರಾದ ಶಿವಕಾಂತ ಮಹಾಜನ್, ಎಂ.ಬಿ.ಮರಮಕಲ್, ಶಿವಾನಂದ ಪಾಟೀಲ್ ಮರತೂರ, ರಾಜಶೇಖರ ಹತಗುಂದಿ, ಸಿದ್ದರಾಮ ಹೊನ್ಕಲ್, ಸತೀಶ ಸಜ್ಜನಶೆಟ್ಟಿ, ಪ್ರೊ..ನಿರಂಜನ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.