ದೇವದುರ್ಗ: ಪಟ್ಟಣದ ಸರ್ಕಾರಿ ನೌಕರರ ಸಂಘಕ್ಕೆ ಸಮುದಾಯ ಭವನ, ಕಚೇರಿ ನಿರ್ಮಾಣಕ್ಕೆ ಅನುದಾನ ನೀಡುವಂತೆ ಒತ್ತಾಯಿಸಿ ಯಾದಗಿರಿಯಲ್ಲಿ ಸಚಿವ ರಮೇಶ ಜಾರಕಿಹೊಳಿಗೆ ಕರ್ನಾಟಕ ಸರ್ಕಾರಿ ನೌಕರರ ಸಂಘ ಸೋಮವಾರ ಮನವಿ ಸಲ್ಲಿಸಿತು.
ದೇವದುರ್ಗ ತಾಲೂಕಿನಲ್ಲಿ ಎಲ್ಲಿಯೂ ಸರ್ಕಾರಿ ನೌಕರರ ಭವನವಿಲ್ಲ. ಇದರಿಂದ ಯಾವುದೇ ಕಾರ್ಯಕ್ರಮ ಮಾಡಲು ಖಾಸಗಿ ಸಮುದಾಯ ಭವನದ ಮೊರೆ ಹೋಗುವ ಸ್ಥಿತಿಯಿದೆ. ಇದರಿಂದ ಹೊರೆಯಾಗುವ ಜತೆಗೆ ಸ್ವಂತ ಕಚೇರಿ ಮಾಡಿಕೊಳ್ಳಲು ಸಮಸ್ಯೆಯಾಗುತ್ತಿದೆ. ಭವನಕ್ಕೆ ಅನುದಾನ ನೀಡುವಂತೆ ಮನವಿ ಮಾಡಿದರೂ ಸ್ಪಂದನೆ ದೊರೆತಿಲ್ಲ. ನೌಕರರ ಭವನ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆಯಿಂದ ಅನುದಾನ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.