ದೇವದುರ್ಗ: ಮಲಿನದಿಂದ ಸಾಂಕ್ರಾಮಿಕ ರೋಗಗಳು ಹರಡುತ್ತಿದ್ದು, ಸ್ವಚ್ಛತೆ ಕಾಪಾಡಿದರೆ ಮಾತ್ರ ಡೆಂಘೆ ಸೇರಿ ಮಾರಕ ರೋಗಗಳಿಂದ ದೂರವಿರಬಹುದು ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಲಕ್ಷ್ಮೀ ಮುಂಡಾಸ್ ಹೇಳಿದರು.
ಪಟ್ಟಣದ ತಿಲಕ್ ಓಣಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾಂಕ್ರಾಮಿಕ ರೋಗಗಳ ನಿಯಂತ್ರಣ ವಿಭಾಗದಿಂದ ಆಯೋಜಿಸಿದ್ದ ಡೆಂಘೆ ಜಾಗೃತಿ ಹಾಗೂ ಸಾಂಕ್ರಾಮಿಕ ರೋಗಗಳ ಬಗ್ಗೆ ಅರಿವು ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದರು.
ಈಡೀಸ್ ಸೊಳ್ಳೆ ಕಚ್ಚುವುದರಿಂದ ಡೆಂಘೆ ಬರುತ್ತದೆ. ಈ ಸೊಳ್ಳೆ ಸ್ವಚ್ಛವಾದ ನಿಂತ ನೀರಿನಲ್ಲಿ ಹುಟ್ಟಿಕೊಳ್ಳುತ್ತದೆ. ಹೀಗಾಗಿ ಪಾತ್ರೆಗಳನ್ನು ಸದಾ ಕಾಲ ಮಾಡಿ ಸ್ವಚ್ಛ ಮಾಡಿ ನೀರು ತುಂಬಿಸಬೇಕು. ನಿರುಪಯುಕ್ತ ವಸ್ತುಗಳನ್ನು ವಿಲೇವಾರಿ ಮಾಡುವ ಮೂಲಕ ಸ್ವಚ್ಛತೆ ಕಾಪಾಡಬೇಕು ಎಂದು ಹೇಳಿದರು.
ಆರೋಗ್ಯ ಶಿಕ್ಷಣಾಧಿಕಾರಿ ಗೀತಮ್ಮ, ತಾಲೂಕು ಮಲೇರಿಯಾ ಮೇಲ್ವಿಚಾರಕ ಓಂಕಾರ ಜಂತೇಕಾರ್, ಆರೋಗ್ಯ