ಲಿಂಗಸುಗೂರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರವನ್ನು ಪುರಸಭೆ ಮಾಜಿ ಅಧ್ಯಕ್ಷೆ ಸುನೀತಾ ಕೆಂಭಾವಿ ಉದ್ಘಾಟಿಸಿದರು. ಪ್ರಾಚಾರ್ಯ ಡಾ.ಹನುಮಂತಪ್ಪ, ಎಸ್ಡಿಎಂಸಿ ಅಧ್ಯಕ್ಷ ಶಂಕರ, ಮುಖ್ಯಶಿಕ್ಷಕ ಶಿವಯೋಗಪ್ಪ, ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಮಹೇಶ ಕುಮಾರ, ಉಪನ್ಯಾಸಕಿ ಅನುಪಮಾ ಪಾಟೀಲ್ ಇದ್ದರು. 
ಜಿಲ್ಲೆ

ಪರಿಸರ ಸ್ವಚ್ಛತೆ ಕಾಪಾಡುವ ಹವ್ಯಾಸ ಬೆಳೆಸಿಕೊಳ್ಳಿ

ಲಿಂಗಸುಗೂರು: ಪರಿಸರ ಸಂರಕ್ಷಣೆ ಮತ್ತು ಆರೋಗ್ಯಕರ ಸಮಾಜದಿಂದ ಸದೃಢ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ನಿಂಗಣ್ಣ ದೇವಿಕೇರಿ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರದಲ್ಲಿ ಮಾತನಾಡಿದರು. ವಿದ್ಯಾರ್ಥಿ ದೆಸೆಯಿಂದ ಶ್ರಮದಾನದ ಮಹತ್ವ ಅರಿತು ಮನೆ ಸುತ್ತ ಮತ್ತು ಸಮಾಜದ ಪರಿಸರ ಸ್ವಚ್ಛತೆ ಕಾಪಾಡುವ ಹವ್ಯಾಸ ಬೆಳೆಸಿಕೊಳ್ಳಬೇಕು.

ಗಾಂಧೀಜಿ ಅವರ ಕನಸು ನನಸಾಗಿಸಲು ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆ ಮಹತ್ಕಾರ್ಯಗಳನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಪುರಸಭೆ ಮಾಜಿ ಅಧ್ಯಕ್ಷೆ ಸುನೀತಾ ಕೆಂಭಾವಿ ಉದ್ಘಾಟಿಸಿದರು.

ಪ್ರಾಚಾರ್ಯ ಡಾ.ಹನುಮಂತಪ್ಪ, ಎಸ್ಡಿಎಂಸಿ ಅಧ್ಯಕ್ಷ ಶಂಕರ, ಮುಖ್ಯಶಿಕ್ಷಕ ಶಿವಯೋಗಪ್ಪ, ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಮಹೇಶ ಕುಮಾರ, ಉಪನ್ಯಾಸಕಿ ಅನುಪಮಾ ಪಾಟೀಲ್ ಇದ್ದರು.