ಇಂಡಿ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ವಿಜ್ಞಾನ ದಿನವನ್ನು ಎಸ್.ಎಸ್. ಅರಬ ಉದ್ಘಾಟಿಸಿದರು. ಸಂತೋಷ ಬಂಡೆ, ಎನ್.ಬಿ. ಚೌಧರಿ, ಎಸ್.ಪಿ. ಪೂಜಾರಿ ಇದ್ದರು. 
ಜಿಲ್ಲೆ

ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ

Vijayapura - Desk - Gurappa Lokuri

ಇಂಡಿ: ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಹಾಗೂ ಸಂಶೋಧನೆ ಮೂಲಕ ಅಂಧಕಾರ ತೊಡೆದು ಹಾಕಬೇಕೆಂದು ಮುಖ್ಯ ಶಿಕ್ಷಕ ಎಸ್.ಎಸ್. ಅರಬ ಹೇಳಿದರು.

ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡ ರಾಷ್ಟ್ರೀಯ ವಿಜ್ಞಾನ ದಿನ ಉದ್ಘಾಟಿಸಿ ಅವರು ಮಾತನಾಡಿದರು.

ಹವಾಮಾನ ಬದಲಾವಣೆಯಿಂದ ಹಿಡಿದು ಜಗತ್ತು ಎದುರಿಸುತ್ತಿರುವ ಅನೇಕ ಸವಾಲುಗಳನ್ನು ಪರಿಹರಿಸುವ ಶಕ್ತಿ ವೈಜ್ಞಾನಿಕ ಸಂಶೋಧನೆಯಲ್ಲಿದೆ. ಮಕ್ಕಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕೆಂದು ತಿಳಿಸಿದರು.

ಶಿಕ್ಷಕ ಸಂತೋಷ ಬಂಡೆ, ಎನ್.ಬಿ. ಚೌಧರಿ, ಎಸ್.ಪಿ. ಪೂಜಾರಿ, ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ, ವಿದ್ಯಾರ್ಥಿಗಳು ಇದ್ದರು.