ಜಿಲ್ಲೆ

ಮಕ್ಕಳಲ್ಲಿ ಪರಿಸರ ಪ್ರಜ್ಞೆ ಬೆಳೆಸಿ

ಪ್ರಸಿನ್ ಕೆ.ಆರ್

ಸೋಮವಾರಪೇಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಮೀಪದ ಬಳಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಮಾಹಿತಿ ಜಾಗೃತಿ ಕಾರ್ಯಕ್ರಮ ಗುರುವಾರ ನಡೆಯಿತು.

ಬೇಳೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಚ್.ಆರ್.ಮೋಹನ ಮಾತನಾಡಿ, ಗ್ರಾಮ ಪಂಚಾಯಿತಿಯಲ್ಲಿ ಕಸ ಸಂಗ್ರಹಣೆ ಮಾಡಲಾಗುತ್ತಿದ್ದು, ಒಣ ಕಸ ಹಾಗು ಹಸಿ ಕಸ ವಿಂಗಡಿಸಿ ನೀಡುವಂತೆ ಮನವಿ ಮಾಡಿದರು. ಮಕ್ಕಳು ಪ್ಲಾಸ್ಟಿಕ್, ರಾಸಾಯನಿಕ ವಸ್ತುಗಳನ್ನು ಬಳಸಬಾರದು, ಪರಿಸರದ ಬಗ್ಗೆ ಕಾಳಜಿ ವಹಿಸುವಂತೆ ತಿಳಿಸಿದರು.

ಅಬಕಾರಿ ಇನ್ಸ್‌ಪೆಕ್ಟರ್ ಶಶಿಕುಮಾರ್, ಶಾಲೆಯ ಮುಖ್ಯಶಿಕ್ಷಕಿ ಭಾಗ್ಯ, ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ರಷಿದ್, ಆಶಾ ಕಾರ್ಯಕರ್ತೆ ಬಿ.ಆರ್.ಶಾರದ, ಶಾಂತಳ್ಳಿ ವಲಯದ ಮೇಲ್ವಿಚಾರಕ ಲಕ್ಷ್ಮಣ್, ಕೃಷಿ ಮೇಲ್ವಿಚಾರಕ ರಾಜಣ್ಣ, ಸೇವಾ ಪ್ರತಿನಿಧಿ ಸುನಿತಾ ಇದ್ದರು.
13ಎಸ್‌ಪಿಟಿ10: ಸೋಮವಾರಪೇಟೆ ಸಮೀಪದ ಬಳಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪರಿಸರ ಮಾಹಿತಿ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅತಿಥಿಗಳು. ಮೋಹನ್, ಭಾಗ್ಯ, ಶಶಿಕುಮಾರ್, ರಷಿದ್ ಇದ್ದರು.