ಜಿಲ್ಲೆ

ನಾಯಕತ್ವ ಗುಣ ಬೆಳೆಸಿಕೊಳ್ಳಿ

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ
ವಿದ್ಯಾರ್ಥಿ ದಿಸೆಯಲ್ಲಿ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು. ಮೊಬೈಲ್​, ಟಿವಿಗಳಿಂದ ದೂರವಿದ್ದು, ಶೈಕ್ಷಣಿಕ ಕಾರ್ಯಕ್ಕೆ ಹೆಚ್ಚಿನ ಗಮನ ನೀಡಬೇಕು ಎಂದು ಮನೋವೈದ್ಯ ಡಾ. ಆನಂದ ಪಾಂಡುರಂಗಿ ಹೇಳಿದರು.
ನಗರದ ಶಾರದಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಶಾಲಾ ಸಂಸತ್​ ರಚನೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಎಸ್​.ಬಿ. ಮುದಿಗೌಡರ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತಿನಿಂದ ಉತ್ತಮ ಪ್ರಜೆಗಳಾಗಿ ತಮ್ಮ ಗುರುಗಳಿಗೆ, ಪಾಲಕರಿಗೆ ಒಳ್ಳೆ ಹೆಸರು ತಂದು ಕೊಡಬೇಕು ಎಂದರು.
ಶಾಲೆ ಕಾರ್ಯಾಧ್ಯಕ್ಷ ಕೆ.ಎಸ್​. ಪಾಟೀಲ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಕೆ.ವಿ. ತಿಮ್ಮಾಪುರ ಮಾತನಾಡಿ, ಎಲ್ಲ ಚುನಾಯಿತ ಪ್ರತಿನಿಧಿ- ವಿದ್ಯಾರ್ಥಿಗಳು ಒಳ್ಳೆ ರೀತಿಯಲ್ಲಿ ತಮ್ಮ ಜವಾಬ್ದಾರಿ ನಿರ್ವಹಿಸಿ ಶಾಲೆಗೆ ಕೀರ್ತಿ ತರಬೇಕು ಎಂದರು. ಎ.ಜಿ. ಮುಳ್ಳೂರ ಪ್ರತಿಜ್ಞಾವಿಧಿ ಬೋಧಿಸಿದರು.
ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳು, ಇತರರು ಇದ್ದರು.