ಜಿಲ್ಲೆ

ರಾಯಣ್ಣನ ಹೋರಾಟದ ಗುಣ ಬೆಳೆಸಿಕೊಳ್ಳಿ

Davangere - Desk - Mahesh Babu E

ಚಿತ್ರದುರ್ಗ: ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆಯಿಂದ ಮಂಗಳವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮದಿನವನ್ನು ಡಿಸಿ ಕಚೇರಿಯಲ್ಲಿ ಆಚರಿಸಲಾಯಿತು.

ರಾಯಣ್ಣ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಜಿಆರ್‌ಜೆ ದಿವ್ಯಾಪ್ರಭು ಪುಷ್ಪನಮನ ಸಲ್ಲಿಸಿದರು.

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂಧನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ, ರಂಗನಿರ್ದೇಶಕ ಕೆಪಿಎಂ ಗಣೇಶಯ್ಯ ಇತರರಿದ್ದರು.