ಜಿಲ್ಲೆ

ಸಂಶೋಧನಾ ಶಕ್ತಿ ಬೆಳೆಸಿಕೊಳ್ಳಿ

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ

ವಿದ್ಯಾರ್ಥಿಗಳು ಅನೇಕ ಹೊಸ ಹೊಸ ಮಾದರಿಗಳನ್ನು ಸಿದ್ಧಪಡಿಸುವ ಮೂಲಕ ಸಂಶೋಧನಾ ಶಕ್ತಿ ಬೆಳೆಸಿಕೊಳ್ಳಬೇಕು. ಇದರಿಂದ ಅತ್ಯುತ್ತಮ ವಿಜ್ಞಾನಿ ಆಗಲು ಸಾಧ್ಯ ಎಂದು ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ವೀರಣ್ಣ ಬೋಳಿಶೆಟ್ಟಿ ಹೇಳಿದರು.

ನಗರದ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ಅಂಗ ಸಂಸ್ಥೆಯಾದ ರಾಜೀವ್​ ಗಾಂಧಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಏರ್ಪಡಿಸಿದ್ದ ವಿಜ್ಞಾನ, ಗಣಿತ, ಸಮಾಜ ವಿಜ್ಞಾನದ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.

ಮುಖ್ಯಾಧ್ಯಾಪಕಿ ವೀಣಾ ತುಪ್ಪದ ಮಾತನಾಡಿ, ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳೂ ಮುಖ್ಯ. ಇಂತಹ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಪ್ರತಿಭೆ ಬೆಳೆಸಿಕೊಳ್ಳಬೇಕು. ಹೊಸ ಹೊಸ ಸಂಶೋಧನೆಗಳ ಮೂಲಕ ತಮ್ಮಲ್ಲಿನ ಪ್ರತಿಭೆ ಹೊರ ಹಾಕಬೇಕು ಎಂದರು.

ಜಿ.ಜಿ. ಹಿರೇಮಠ ಮಾತನಾಡಿದರು. ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆ ಆಡಳಿತ ಮಂಡಳಿ ಕಾರ್ಯದರ್ಶಿ ರಾಧಾಕೃಷ್ಣನ್​, ಶ್ರೀಶೈಲ ಯಕ್ಕುಂಡಿಮಠ, ಉಪ ಪ್ರಾಂಶುಪಾಲೆ ಸುಧಾ ಕಾಳೆ, ಸುರೇಖಾ, ಇತರರು ಇದ್ದರು.