ವಿಜಯಪುರದ ನವಭಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಪ್ರೊಜೆಕ್ಟ್ ತಯಾರಿಸಿ ಅದರ ಕುರಿತು ವಿಷಯ ಪ್ರಸ್ತುತಪಡಿಸಿದರು. ಪ್ರೊ. ಎಂ.ಎಸ್. ಖೊದ್ನಾಪೂರ ಮತ್ತಿತರರಿದ್ದಾರೆ. 
ಜಿಲ್ಲೆ

ಆಧುನಿಕತೆಗೆ ತಕ್ಕಂತೆ ಕೌಶಲ ಬೆಳೆಸಿಕೊಳ್ಳಿ

ದತ್ತಾತ್ರೇಯ ಪಿ ಕುಲಕರ್ಣಿ

ವಿಜಯಪುರ: ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ವಿದ್ಯಾರ್ಥಿಗಳಿಗೆ ಪಠ್ಯಕ್ರಮ, ಪಠ್ಯ ಯೋಜನೆ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಸಕ್ರಿಯವಾಗಿ ಪಾಲ್ಗೊಂಡು ವೈವಿಧ್ಯಮ ಕೌಶಲ ಒಡಮೂಡಿಸಲು ಪೂರಕವಾಗಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಎಂ.ಎಸ್. ಖೊದ್ನಾಪೂರ ಹೇಳಿದರು.

ನಗರದ ನವಭಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವಿಭಾಗದಿಂದ ಮಂಗಳವಾರ ಬಿಕಾಂ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಪ್ರೊಜೆಕ್ಟ್ ಕಾರ್ಯ ಮತ್ತು ಪ್ರಸ್ತುತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪದವಿ ವಿದ್ಯಾರ್ಥಿಗಳು ಕೇವಲ ವಿಷಯ ಜ್ಞ್ಞಾನವನ್ನು ಪಡೆಯಲು ಸಿಮೀತವಾಗದೇ ಆಧುನಿಕತೆಗೆ ತಕ್ಕಂತೆ ವಿವಿಧ ಕೌಶಲಗಳನ್ನು ಅಳವಡಿಸಿಕೊಳ್ಳುವಂತೆ ಅವರು ಸಲಹೆ ನೀಡಿದರು.

ಆಂಗ್ಲಭಾಷಾ ಪ್ರಾಧ್ಯಾಪಕ ಡಾ. ಬಿ.ಎನ್. ಶಾಡದಳ್ಳಿ ಮಾತನಾಡಿ, ಸದ್ಯದ ಸ್ಪರ್ಧಾತ್ಮಕ ಯುಗದಲ್ಲಿ ಕ್ರಿಯಾಶೀಲತೆಗೆ ಹೆಚ್ಚಿನ ಪ್ರಾಧ್ಯಾನತೆಯಿದೆ. ಹೀಗಾಗಿ ವಿದ್ಯಾರ್ಥಿಗಳು ಪಠ್ಯಕ್ಕೆ ಸಂಬಂಧಿಸಿದ ವಿಷಯಗಳ ಜತೆಗೆ ಸಂವಹನ ಕೌಶಲ ಮತ್ತು ಪ್ರಾಯೋಗಿಕ ಜ್ಞಾನ ನೀಡುವ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಷಯ ಮಂಡನೆಯ ಕಲೆಯನ್ನು ಕರಗತ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳಾದ ಸುಶ್ಮೀತಾ ಶಿರಹಟ್ಟಿ, ಕಾವೇರಿ ಕಂಟೇನವರ, ಶಂಕ್ರೆಮ್ಮ ನಾಗಠಾಣ, ಗೀತಾ ಮಿಸ್ಕಿನ್, ಐಶ್ವರ್ಯ ಕುಂಬಾರ, ಆಸ್ಮಾ ಮನಿಯಾರ, ಶ್ರೀಶೈಲ ಪಟ್ಟಣಶೆಟ್ಟಿ, ರಾಜಕುಮಾರ ಕನಮಸ, ಅಶ್ವಿನಿ ಕುಂಬಾರ, ಸೃಷ್ಠಿ ಗೋಂದಳಿ ತಮ್ಮ ಪ್ರೊಜೆಕ್ಟ್ ತಯಾರಿಸಿ ಅದರ ಕುರಿತು ವಿಷಯ ಪ್ರಸ್ತುತಪಡಿಸಿದರು.