filter: 0; fileterIntensity: 0.0; filterMask: 0; captureOrientation: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.9736111, 0.834375);sceneMode: 2;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: auto;albedo: ;confidence: ;motionLevel: 0;weatherinfo: null;temperature: 40; 
ಜಿಲ್ಲೆ

ಅಭಿವೃದ್ಧಿ ಕಾರ್ಯಗಳಿಗೆ ಪ್ರಾಶಸ್ತ್ಯ

ಪ್ರಶಾಂತ ಹೂಗಾರ

ಚಿಕ್ಕೋಡಿ: ಗ್ರಾಮೀಣ ಪ್ರದೇಶದ ರಸ್ತೆ, ಕುಡಿಯುವ ನೀರು ಸೇರಿ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು ಎಂದು ಶಾಸಕ ದುರ್ಯೋಧನ ಐಹೊಳೆ ಹೇಳಿದರು.

ತಾಲೂಕಿನ ಬೆಣ್ಣಿಹಳ್ಳಿಯಲ್ಲಿ 30 ಲಕ್ಷ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣ, 40 ಲಕ್ಷ ರೂ. ವೆಚ್ಚದ ಮುಗಳಿಖಜಗೌಡನಟ್ಟಿಯ ಅಮ್ಮಣಗಿ ಕೂಡು ರಸ್ತೆ ಕಾಮಗಾರಿಗೆ ಬುಧವಾರ ಚಾಲನೆ ನೀಡಿ ಮಾತನಾಡಿ, ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದರು.

ಬಿಜೆಪಿ ರಾಜ್ಯ ರೈತ ಮೋರ್ಚಾ ಮಾಜಿ ಉಪಾಧ್ಯಕ್ಷ ದುಂಡಪ್ಪ ಬೆಂಡವಾಡೆ, ಈರಗೌಡ ಪಾಟೀಲ, ರಾಜು ಹರಗನ್ನವರ, ರಾಮಗೌಡ ಪಾಟೀಲ, ವಿಜಯ ಕೋಠಿವಾಲೆ ಇತರರಿದ್ದರು.