ಅಥಣಿ ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷ ಪರಪ್ಪ ಸವದಿ ಮತ್ತು ಉಪಾಧ್ಯಕ್ಷ ಶಂಕರ ವಾಘಮೋಡೆ ಅವರನ್ನು ಕಾರ್ಖಾನೆ ಆಡಳಿತ ಮಂಡಳಿಯಿಂದ ಗೌರವಿಸಲಾಯಿತು. ನಿರ್ದೇಶಕರಾದ ಗುರುಬಸು ತೆವರಮನಿ, ಚಂದ್ರಕಾಂತ ಪಾಟೀಲ, ಶಾಂತಿನಾಥ ನಂದೇಶ್ವರ, ಘೂಳಪ್ಪ ಜತ್ತಿ, ರುಕ್ಮಿಣಿ ಕುಲಕರ್ಣಿ, ರಮೇಶ ಪಟ್ಟಣ, ಸೌರಭ ಪಾಟೀಲ ಇದ್ದರು. 
ಜಿಲ್ಲೆ

ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ

ಅಥಣಿ: ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾಗಿ ಪರಪ್ಪ ಸವದಿ ಮತ್ತು ಉಪಾಧ್ಯಕ್ಷರಾಗಿ ಶಂಕರ ವಾಘಮೋಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾರ್ಖಾನೆಯ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಆಡಳಿತ ಮಂಡಳಿಯ ಸಭೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಗೆ ಎಲ್ಲ ಸದಸ್ಯರು ಒಮ್ಮತ ಸೂಚಿಸಿರುವ ಹಿನ್ನೆಲೆಯಲ್ಲಿ ಎಂದು ಚುನಾವಣಾಧಿಕಾರಿ ಕೆ.ಎಲ್.ಶ್ರೀನಿವಾಸ ಅವಿರೋಧ ಆಯ್ಕೆ ಎಂದು ಘೋಷಿಸಿದರು.

ಬಳಿಕ ಅಧ್ಯಕ್ಷ ಪರಪ್ಪ ಸವದಿ ಮಾತನಾಡಿ, ಆಡಳಿತ ಮಂಡಳಿ ಸಹಕಾರ ಮತ್ತು ಡಿಸಿಎಂ ಲಕ್ಷ್ಮಣ ಸವದಿ, ಶಾಸಕ ಮಹೇಶ ಕುಮಠಳ್ಳಿ ಮಾರ್ಗದರ್ಶನದಲ್ಲಿ ಸಕ್ಕರೆ ಕಾರ್ಖಾನೆ ಹಾಗೂ ರೈತರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಕಾರ್ಖಾನೆಗೆ ಕಬ್ಬು ಪೂರೈಸಿದ ರೈತರಿಗೆ ಸಕಾಲಕ್ಕೆ ಬಿಲ್ ಪಾವತಿ ಮಾಡುವ ಮೂಲಕ ಕೃಷ್ಣಾ ಸಕ್ಕರೆ ಕಾರ್ಖಾನೆಯನ್ನು ಮಾದರಿ ಕಾರ್ಖಾನೆಯನ್ನಾಗಿ ಮಾಡಲಾಗುವುದು.

ಆಡಳಿತ ಮಂಡಳಿ ಹಾಗೂ ರೈತರು ನೆರವು ನೀಡಬೇಕು ಎಂದು ಕೋರಿದರು. ಗುರುಬಸು ತೆವರಮನಿ, ಚಂದ್ರಕಾಂತ ಪಾಟೀಲ, ಶಾಂತಿನಾಥ ನಂದೇಶ್ವರ, ಘೂಳಪ್ಪ ಜತ್ತಿ, ರುಕ್ಮಿಣಿ ಕುಲಕರ್ಣಿ, ರಮೇಶ ಪಟ್ಟಣ, ಸೌರಭ ಪಾಟೀಲ, ಸುನಂದಾ ನಾಯಿಕ, ಸಿದ್ರಾಯ ನಾಯಿಕ, ಹನುಮಂತ ಜಗದೇವ, ಮಲ್ಲಿಕಾರ್ಜುನ ಗೋಟಖಿಂಡಿ ಇದ್ದರು.