ಕಾಗವಾಡ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ತೊಡಗಿರುವುದರಿಂದ ಅನುದಾನದ ಕೊರತೆಯಿಂದಾಗಿ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ ಎಂದು ಮಾಜಿ ಸಚಿವ ಶ್ರೀಮಂತ ಪಾಟೀಲ ಅಸಮಾಧಾನ ವ್ಯಕ್ತಪಡಿಸಿದರು.
ತಾಲೂಕಿನ ಕೆಂಪವಾಡ ಸಕ್ಕರೆ ಕಾರ್ಖಾನೆಯಲ್ಲಿ ಈಚೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಒಂದೂವರೆ ವರ್ಷದಿಂದ ಸರ್ಕಾರ ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಜನರಿಗೆ ಪಂಚ ಗ್ಯಾರಂಟಿ ಯೋಜನೆ ತಲುಪಿಸುವುದರಲ್ಲೇ ದಿನ ಕಳೆಯುತ್ತಿದ್ದು, ಅಭಿವೃದ್ಧಿ ಕಾಮಗಾರಿ ಕುಂಠಿತಗೊಂಡಿವೆ.
ಸುಮಾರು 25 ಸಾವಿರ ಎಕರೆಗೆ ನೀರಾವರಿ ಸೌಲಭ್ಯ ಕಲ್ಪಿಸುವ ಕ್ಷೇತ್ರದ ಮಹತ್ವಾಕಾಂಕ್ಷೆ ಬಸವೇಶ್ವರ ಏತ ನೀರಾವರಿ ಯೋಜನೆ ಸೇರಿ ವಿವಿಧ ಕಾರ್ಯಗಳಿಗೂ ಅನುದಾನ ಸಿಕ್ಕಿಲ್ಲ. ಇದಕ್ಕೆಲ್ಲ ಪಂಚ ಗ್ಯಾರಂಟಿ ಯೋಜನೆಗಳೆ ಕಾರಣ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.