ಜಿಲ್ಲೆ

ದಾನಿಗಳಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿ

ಚಿಂತಾಮಣಿ: ಜನಪ್ರತಿನಿಧಿಗಳ ಸೇವೆಯನ್ನು ಸಮಾಜದ ಜನತೆ ಸ್ಮರಿಸುತ್ತಾರೆ ಎಂದು ಕೋರ‌್ಲಪರ್ತಿ ಗ್ರಾಮ ಪಂಚಾಯಿತಿ ಸದಸ್ಯೆ ಶಾರದಾ ಅಭಿಪ್ರಾಯಪಟ್ಟರು.

ತಾಲೂಕಿನ ಕದಿರೇನಹಳ್ಳಿ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಶಿಡ್ಲಘಟ್ಟ ಶಾಸಕ ಬಿ.ಎನ್.ರವಿಕುಮಾರ್ ನೀಡಿದ್ದ ಲೇಖನ ಸಾಮಗ್ರಿಗಳನ್ನು ಬುಧವಾರ ವಿತರಿಸಿ ಮಾತನಾಡಿ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಯೋಜನೆಯಡಿಯಲ್ಲಿ ಪಠ್ಯಪುಸ್ತಕ, ಸಮವಸ್ತ್ರ, ಶೂ ಮತ್ತು ಸಾಕ್ಸ್, ಬಿಸಿಯೂಟ, ಪೌಷ್ಟಿಕ ಆಹಾರ, ವಿದ್ಯಾರ್ಥಿ ವೇತನದಂತಹ ಹಲವು ಸೌಲಭ್ಯಗಳನ್ನು ಸರ್ಕಾರ ಒದಗಿಸುತ್ತಿದೆ. ಜತೆಗೆ ಜನ ಪ್ರತಿನಿಧಿಗಳು, ದಾನಿಗಳ ಮುತುವರ್ಜಿಯಿಂದ ಸರ್ಕಾರಿ ಶಾಲೆಗಳು ಬೆಳೆಯುತ್ತವೆ ಎಂದರು.

ಮುಖ್ಯಶಿಕ್ಷಕ ಕೆ.ನರಸಿಂಹಪ್ಪ ಮಾತನಾಡಿದರು. ಎಸ್‌ಡಿಎಂಸಿ ಅಧ್ಯಕ್ಷ ಸಿ.ವೆಂಕಟೇಶ್, ಶಿಕ್ಷಕ ಬಿ.ಎನ್.ಶ್ರೀನಿವಾಸ್, ಎ.ನಾರಾಯಣಸ್ವಾಮಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.